ಕಲಬುರಗಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಹಾಗೂ ಯರಕೊಂಡ ಗ್ರಾಮಗಳಲ್ಲಿ ಮತ್ತೆ ಲಘು ಭೂಕಂಪನ ಅನುಭವ ಆಗಿದೆ.
ನಸುಕಿನ ಜಾವ 5.40ರ ಸಮಯದಲ್ಲಿ ಎರಡು ಬಾರಿ ಲಘು ಭೂಕಂಪನ ಅನುಭವ ಆಗಿದ್ದು, ಕಂಪನಕ್ಕೆ ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದಿವೆ. ಜನರು ಆತಂಕದಿಂದ ಮನೆಯಿಂದ ಹೊರಬಂದಿದ್ದಾರೆ.
ನಿನ್ನೆ ಕೂಡಾ ಗ್ರಾಮದಲ್ಲಿ ಲಘು ಭೂ ಕಂಪನವಾಗಿತ್ತು. ಕಳೆದ ಕೆಲ ವರ್ಷಗಳಲ್ಲಿ ಹಲವಾರು ಬಾರಿ ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಭಾರಿ ಸದ್ದು ಕೇಳಿ ಬರ್ತಿತ್ತು. ಇದೀಗ ಜನರಿಗೆ ಮೇಲಿಂದ ಮೇಲೆ ಲಘು ಭೂಕಂಪನ ಅನುಭವ ಆಗುತ್ತಿದೆ. ಇದನ್ನೂ ಓದಿ: RSS ಆನೆ ಇದ್ದಂತೆ, ಅಕ್ಕ-ಪಕ್ಕದವರಿಗೆ ತಲೆಕೆಡಿಸಿಕೊಳ್ಳಲ್ಲ: ಸಿ.ಟಿ.ರವಿ
ಕೂಡಲೇ ಸರ್ಕಾರ ಗ್ರಾಮದಲ್ಲಿ ಭೂಕಂಪದ ಆಗುತ್ತಿರುವುದರ ನಿಖರ ಮಾಹಿತಿ ತಿಳಿಸಬೇಕು. ಒಂದು ವೇಳೆ ಭೂಕಂಪ ಕೇಂದ್ರ ಸ್ಥಾನ ಆಗಿದ್ದರೆ ಎರಡು ಗ್ರಾಮ ಸ್ಥಳಾಂತರಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಚಲಿಸುವ ರೈಲಿನಲ್ಲಿ ಸಾಮೂಹಿಕ ಅತ್ಯಾಚಾರ- ನಾಲ್ವರ ಬಂಧನ