ಕೊಲಂಬೋ: ಈಸ್ಟರ್ ಹಬ್ಬದಂದು ಶ್ರೀಲಂಕಾದಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ 9 ಮಂದಿ ಮುಸ್ಲಿಂ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಒಂಬತ್ತು ಜನ ಸಚಿವರು ಈಸ್ಟರ್ ಹಬ್ಬದಂದು ಬಾಂಬ್, ಆತ್ಮಾಹುತಿ ದಾಳಿ ನಡೆಸಿದ ಇಸ್ಲಾಮಿಕ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತಮ್ಮ ವಿರುದ್ಧ ಕೇಳಿ ಬಂದ ಆರೋಪದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ರಾಜೀನಾಮೆ ನೀಡಿದ ಸಚಿವರು ಒತ್ತಾಯಿಸಿದ್ದಾರೆ.
Advertisement
Advertisement
ಸರಣಿ ಬಾಂಬ್ ಸ್ಫೋಟದ ನಡೆಸಿದ ನ್ಯಾಷನಲ್ ಥೌಹೀತ್ ಜಮಾತ್ (ಎನ್‍ಟಿಜೆ) ನಿಷೇಧಿತ ಉಗ್ರ ಸಂಘಟನೆಯೊಂದಿಗೆ 9 ಜನ ಮುಸ್ಲಿಂ ಸಂಪರ್ಕ ಇಟ್ಟುಕೊಂಡಿದ್ದಾರೆ. ಹೀಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ದೇಶವ್ಯಾಪಿ ಒತ್ತಾಯ ಕೇಳಿ ಬಂದಿತ್ತು.
Advertisement
ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪ ಎದುರಿಸುತ್ತಿರುವ ಬೌದ್ಧ ಧರ್ಮ ಗುರುಗಳು ಸಹ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗುತ್ತಿದ್ದಂತೆ ಆರೋಪ ಎದುರಿಸುತ್ತಿರುವ 9 ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ.
Advertisement
ಶ್ರೀಲಂಕಾ ಸಂಸತ್ 225 ಸದಸ್ಯ ಬಲ ಹೊಂದಿದ್ದು, 11 ಮುಸ್ಲಿಂ ಸಂಸದರಿದ್ದಾರೆ. ಈ ಪೈಕಿ 9 ಜನ ಕ್ಯಾಬಿನೆಟ್, ರಾಜ್ಯ ಹಾಗೂ ಡೆಪ್ಯುಟಿ ಸಚಿವರಾಗಿ ನೇಮಕಗೊಂಡಿದ್ದರು.
ಏಪ್ರಿಲ್ 21ರಂದು ನಡೆದ ಬಾಂಬ್ ದಾಳಿಯಲ್ಲಿ ಕನ್ನಡಿಗರು ಸೇರಿದಂತೆ 258 ಜನರು ಪ್ರಾಣ ಕಳೆದುಕೊಂಡಿದ್ದು, ಸುಮಾರು 500 ಜನರು ಗಂಭೀರವಾಗಿ ಗಾಯಗೊಂಡಿದ್ದರು.