ಭೋಪಾಲ್: ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಪರಿಣಾಮ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಚುನಾವಣಾ ಆಯೋಗ 72 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ಹೇರಿದೆ.
ಸಾಧ್ವಿ ಪ್ರಜ್ಞಾ ಸಿಂಗ್ ಅವರು ಮಾಜಿ ಐಪಿಎಸ್ ಅಧಿಕಾರಿ ಹೇಮಂತ್ ಕರ್ಕರೆ ವಿರುದ್ಧ ಮತ್ತು ಬಾಬ್ರಿ ಮಸೀದಿ ಧ್ವಂಸ ವಿಚಾರದ ಬಗ್ಗೆ ವಿವಾದತ್ಮಾಕ ಹೇಳಿಕೆ ನೀಡಿದರು. ಇದರಂತೆ ಪ್ರಜ್ಞಾರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಆಯೋಗ ಗುರುವಾರ ಬೆಳಗ್ಗೆ 6 ರಿಂದ ಮುಂದಿನ 72 ಗಂಟೆಗಳ ಕಾಲ ಪ್ರಚಾರ ಮಾಡದಂತೆ ನಿಷೇಧ ವಿಧಿಸಿದೆ.
Advertisement
Advertisement
ಈ ನಿಷೇದ ಹೇರಿರುವ ಬಗ್ಗ ಪ್ರತಿಕ್ರಿಯೆ ನೀಡಿರುವ ಸಾಧ್ವಿ ಪ್ರಜ್ಞಾ ಸಿಂಗ್, ಇದರಿಂದ ಯಾವುದೇ ಸಮಸ್ಯೆ ಇಲ್ಲ ನಾನು ಚುನಾವಣಾ ಆಯೋಗಕ್ಕೆ ಗೌರವ ನೀಡುತ್ತೇನೆ ಎಂದು ಹೇಳಿದ್ದಾರೆ.
Advertisement
2008 ರಲ್ಲಿ ನಡೆದ ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸಾಧ್ವಿ ಠಾಕೂರ್ ಅವರು, 2011 ರಲ್ಲಿ ಮುಂಬೈ ಭಯೋತ್ಪಾದಕರ ದಾಳಿಯಲ್ಲಿ ನಿಧನರಾದ ಮಾಜಿ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್)ದ ಮುಖ್ಯಸ್ಥರಾದ ಹೇಮಂತ್ ಕರ್ಕರೆ ಅವರು ಮಾಡಿದ ಕರ್ಮಕ್ಕೆ ಅವರಿಗೆ ಆ ರೀತಿಯ ಸಾವು ಬಂತು ಎಂದು ಹೇಳಿಕೆ ನೀಡಿದ್ದರು. 1992 ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಮಾಡಿದವರಲ್ಲಿ ನಾನು ಒಬ್ಬಳು ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಆಗುತ್ತದೆ ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್‍ರನ್ನ ಭಯೋತ್ಪಾದಕ ಎಂದು ಕರೆದಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಆಯೋಗ ಸಾಧ್ವಿ ಅವರಿಗೆ ಮೂರನೇ ನೋಟಿಸ್ ಜಾರಿ ಮಾಡಿದೆ.
Advertisement
48 ವರ್ಷದ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಭೋಪಾಲ್‍ನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.