ರಾಂಚಿ: ಜಾರಿ ನಿರ್ದೇಶನಾಲಯವು ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮತ್ತು ಅವರ ಮನೆಕೆಲಸಗಾರ ಜಹಾಂಗೀರ್ ಆಲಂ ಅವರನ್ನ ಸೋಮವಾರ ತಡರಾತ್ರಿ ಬಂಧಿಸಿದೆ (ED Arrests). ಇದರೊಂದಿಗೆ ದಾಳಿ ವೇಳೆ ಸಿಕ್ಕ 35 ಕೋಟಿ ರೂ.ಗಳಷ್ಟು ನಗದನ್ನು ವಶಪಡಿಸಿಕೊಂಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸಂಜೀವ್ ಲಾಲ್ (Sanjeev Lal) ಮತ್ತು ಜಹಾಂಗೀರ್ ಆಲಂ ಇಬ್ಬರನ್ನೂ ರಾತ್ರಿಯಿಡೀ ವಿಚಾರಣೆ ನಡೆಸಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ದೇಶದಲ್ಲಿ ಮೂರನೇ ಹಂತದ ಚುನಾವಣೆ – 11 ರಾಜ್ಯಗಳ 92 ಕ್ಷೇತ್ರಗಳಲ್ಲಿ ಮತದಾನ
ಏನಿದು ಪ್ರಕರಣ?
ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸೋಮವಾರ ಇಡಿ ಅಧಿಕಾರಿಗಳ ತಂಡ ರಾಂಚಿಯ ವಿವಿಧೆಡೆ ದಾಳಿ ನಡೆಸಿತ್ತು. ಈ ವೇಳೆ ಗ್ರಾಮೀಣಾಭಿವೃದ್ಧಿ ಮಂತ್ರಿಯೂ ಆಗಿರುವ ಕಾಂಗ್ರೆಸ್ ಮುಖಂಡ ಆಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಸಹಾಯಕನ ಮನೆಯಲ್ಲಿ ಈ ದುಡ್ಡಿನ ರಾಶಿ ಕಂಡುಬಂದಿತ್ತು. ಇದನ್ನೂ ಓದಿ: ಜಾರ್ಖಂಡ್ ಸಚಿವನ ಆಪ್ತನ ಮನೆಯಲ್ಲಿ 12 ಗಂಟೆ, 6 ಮೆಷಿನ್, 30 ಕೋಟಿ ಹಣ ಎಣಿಕೆ!
ಯಾವುದೇ ದಾಖಲೆಗಳನ್ನು ಒಳಗೊಂಡಿರದ ಈ ಹಣವನ್ನು 12 ಗಂಟೆಗಳ ಕಾಲ 6 ಮಷಿನ್‍ಗಳ ಮೂಲಕ ಅಧಿಕಾರಿಗಳು ಎಣಿಕೆ ಮಾಡಿದ್ದರು. ಸತತ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು 32 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದರು. ಇದೇ ವೇಳೆ ಕೇಂದ್ರಿಯ ತನಿಖಾ ದಳ ನಡೆಸಿದ್ದ ದಾಳಿಯಲ್ಲೂ 3 ಕೋಟಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಇದನ್ನೂ ಓದಿ: ಪ್ರಜ್ವಲ್ ವಿದೇಶಕ್ಕೆ ಹಾರಲು ರಾಜ್ಯ ಸರ್ಕಾರವೇ ಹೊಣೆ : ಮೌನ ಮುರಿದ ಮೋದಿ
ಮೋದಿ ಹೇಳಿದ್ದೇನು?
ಜಾರ್ಖಂಡ್‍ನಲ್ಲಿ ದುಡ್ಡಿನ ಪರ್ವತವೇ ಪತ್ತೆಯಾಗಿದೆ. ಇದು ಜನರಿಂದ ಲೂಟಿ ಹೊಡೆದ ಹಣ. ಭ್ರಷ್ಟಾಚಾರದ ವಿರುದ್ಧ ಮೋದಿ ಕ್ರಮ ತಗೋತಾರೆ ಅನ್ನೊದಕ್ಕೇ ಇದೆ ಸಾಕ್ಷಿ. ಆದರೆ ಇದಕ್ಕೂ ತಮಗೂ ಸಂಬಂಧವೇ ಇಲ್ಲ ಎಂದು ಆಲಂಗೀರ್ ಸ್ಪಷ್ಟಪಡಿಸಿದ್ದಾರೆ. ಸಂಜೀವ್ ಲಾಲ್ ಸರ್ಕಾರ ಒದಗಿಸಿದ್ದ ಆಪ್ತ ಕಾರ್ಯದರ್ಶಿ ಅಷ್ಟೇ. ತಪ್ಪು ಮಾಡಿದವರ ವಿರುದ್ಧ ಕ್ರಮ ಆಗಲಿ ಎಂದಿದ್ದಾರೆ ಎಂದು ಖಡಕ್ಕಾಗಿ ಪ್ರತಿಕ್ರಿಯಿಸಿದ್ದಾರೆ.