ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.
ಗ್ರೂಪ್ ಸಿ ಮತ್ತು ಡಿ ಸಿಬ್ಬಂದಿ, 9 ರಿಂದ 12ನೇ ತರಗತಿಗಳ ಸಹಾಯಕ ಶಿಕ್ಷಕರು ಹಾಗೂ ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದ ಬಗ್ಗೆ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಮೇರೆಗೆ ನಿನ್ನೆ ಚಟರ್ಜಿ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಇಂದು ಬಂಧನಕ್ಕೊಳಪಡಿಸಿದೆ. ಇದನ್ನೂ ಓದಿ: ಶಿವಸೇನೆಯಲ್ಲಿ ಸಿಂಬಲ್ ಫೈಟ್- ಉದ್ಧವ್, ಶಿಂಧೆ ಬಣಕ್ಕೆ ಚುನಾವಣೆ ಆಯೋಗ ನೋಟಿಸ್
The SSC scam is a massive scam & recruitments were auctioned off to highest bidders ! This scam affected those ordinary youth who were seeking jobs desperately!
It is not limited to just #ParthaChatterjee – clearly the entire system was being patronised from the top & by TMC pic.twitter.com/bKOywUu85r
— Shehzad Jai Hind (@Shehzad_Ind) July 23, 2022
ಪ್ರಸ್ತುತ ಕೈಗಾರಿಕಾ ಮತ್ತು ವಾಣಿಜ್ಯ ಸಚಿವರಾಗಿರುವ ಪಾರ್ಥ ಚಟರ್ಜಿ ಅವರು ಈ ಹಿಂದೆ ಶಿಕ್ಷಣ ಸಚಿವರಾಗಿದ್ದಾಗ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ (WBSSC) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಿರುವುದಾಗಿ ಆರೋಪಿಸಲಾಗಿದೆ.
ನಿನ್ನೆಯಷ್ಟೇ ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆಯೊಬ್ಬರ ಮನೆ ಮೇಲೆ ದಾಳಿ ನಡೆಸಿ, 20 ಕೋಟಿ ರೂ. ಹಣವನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿತ್ತು. ಇದನ್ನೂ ಓದಿ: ಬಹುಮಾನದ ಮೊತ್ತ 85 ಸಾವಿರಕ್ಕೆ ಏರಿಸಿದ ಕೆಲವೇ ಹೊತ್ತಲ್ಲಿ ಸಿಕ್ತು ಕಳೆದು ಹೋಗಿದ್ದ ಗಿಳಿ!
ಅರ್ಪಿತಾ ಮುಖರ್ಜಿ ಮನೆಯಿಂದ ವಶಪಡಿಸಿಕೊಳ್ಳಲಾದ 20 ಕೋಟಿ ಹಣ ಶಿಕ್ಷಕರ ನೇಮಕಾತಿ ಹಗರಣದಿಂದ ಬಂದಿರುವ ಆದಾಯ ಎಂದು ಶಂಕಿಸಲಾಗಿತ್ತು. ED ರೇಡ್ ವೇಳೆ ಅರ್ಪಿತಾ ಮನೆ ಆವರಣದಿಂದ 20ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನೂ ವಶಪಡಿಸಿಕೊಂಡು, ಮೊಬೈಲ್ ಫೋನ್‌ಗಳನ್ನು ಹೊಂದಿರುವ ಬಗೆಗಿನ ಉದ್ದೇಶವನ್ನೂ ಖಚಿತಪಡಿಸಿಕೊಳ್ಳಲು ತನಿಖೆ ನಡೆಸಲಾಗಿತ್ತು.