ಮೈಸೂರು: ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದಾಗಿನಿಂದಲೂ ಇ.ಡಿ., ಸಿಬಿಐ ಎಲ್ಲಾ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸೋನಿಯಾ ಗಾಂಧಿ ಅವರಿಗೆ ಜುಲೈ 21ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸಮನ್ಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜಕೀಯವಾಗಿ ಕಿರುಕುಳ ನೀಡುತ್ತಿದೆ. ರಾಜಕೀಯ ದ್ವೇಷದಿಂದ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಮಾಯಕರಲ್ಲ: ಸಿ.ಟಿ. ರವಿ
Advertisement
Advertisement
ರಾಹುಲ್ ಗಾಂಧಿಗೆ 5 ದಿನಗಳ ಕಾಲ ಇ.ಡಿ. ಅಧಿಕಾರಿಗಳು ಕಿರುಕುಳ ನೀಡಿದ್ರು. ಇದು ಚುನಾವಣೆ ಹತ್ತಿರ ಬರುತ್ತಿದೆ ಅಂತಾ ಏನೂ ಇಲ್ಲ. ಮೋದಿ ಅವರು ಪ್ರಧಾನಿಯಾಗಿ ಅಧಿಕಾರಕ್ಕೆ ಬಂದಾಗಿನಿಂದಲೂ ಇಡಿ, ಸಿಬಿಐ ಎಲ್ಲಾ ಸ್ವಾಯತ್ತ ಸಂಸ್ಥೆಗಳನ್ನ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕ್ಷೇತ್ರದ ಅಭಿವೃದ್ಧಿಗೆ ಮನೆ ಮಗನಂತೆ ಕೆಲಸ ಮಾಡ್ತೀನಿ: ಮುನಿರತ್ನ
Advertisement
Advertisement
ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಮನಿ ಲಾಂಡರಿಂಗ್ (ಹಣ ಅಕ್ರಮ ವರ್ಗಾವಣೆ) ಆಗಿಲ್ಲ. ಕಪ್ಪು ಹಣವನ್ನ ಬೇರೆ ಕಡೆ ಹಾಕಿದ್ರೆ ಅದು ಮನಿ ಲಾಂಡರಿಂಗ್ ಆಗುತ್ತೆ. ಕಾಂಗ್ರೆಸ್ ಪಕ್ಷ 90 ಕೋಟಿ ಸಾಲ ಕೊಟ್ಟಿದೆ. ಹಾಗಾಗಿ ಇದು ರಾಜಕೀಯ ಪ್ರೇರಿತವಾದ ಸಮನ್ಸ್. ಸುಳ್ಳು ಕೇಸ್‌ಗಳನ್ನ ಹಾಕಿ ಕಿರುಕುಳ ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.