ಬೆಂಗಳೂರು/ ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank Shivamogga) ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ (Manjunath Gowda) ನಿವಾಸ ಸೇರಿದಂತೆ 8 ಕಡೆ ಇಡಿ ದಾಳಿ ನಡೆಸಿದೆ. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಗೆಸ್ಟ್‌ಹೌಸ್ ಮೇಲೂ ದಾಳಿ ನಡೆದಿದೆ. ಇದನ್ನೂ ಓದಿ: ಮಧ್ಯರಾತ್ರಿ ಎದೆ ಮುಟ್ಟಿ ಯುವಕನ ಅಸಭ್ಯ ವರ್ತನೆ ಕೇಸ್ – ಯುವತಿಯನ್ನು ಪತ್ತೆ ಹಚ್ಚೋದೆ ದೊಡ್ಡ ಸವಾಲು
ಕೋಟ್ಯಂತರ ರೂ ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಮಂಜುನಾಥ ಗೌಡ ಅವರನ್ನು ಎಸಿಬಿ ಬಂಧನ ಮಾಡಿತ್ತು. ಆದರೆ ಚಾರ್ಜ್ ಶೀಟ್ ಅಲ್ಲಿ ಮಂಜುನಾಥ್ ಗೌಡ ಹೆಸರನ್ನು ಕೈಬಿಡಲಾಗಿತ್ತು. ಬಳಿಕ ಇಡಿ ಇಸಿಐಆರ್ ದಾಖಲು ಮಾಡಿ ತನಿಖೆ ನಡೆಸಲು ಮುಂದಾಗಿತ್ತು.
ಇಡಿ ತನಿಖೆಗೆ ಮುಂದಾಗುತ್ತಿದ್ದಂತೆ ಮಂಜುನಾಥ್ ಗೌಡ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಇಡಿ ಕಾನೂನು ಹೋರಾಟದ ಬಳಿಕ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿತ್ತು.