ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) 5,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ.
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಇಡಿ ಅಧಿಕಾರಿಗಳು ನವಾಬ್ ಮಲಿಕ್ ವಿರುದ್ಧ ಸುಮಾರು 5,000 ಪುಟಗಳ ಚಾರ್ಜ್ ಶೀಟ್ ಅನ್ನು ಇಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಪ್ರಕರಣಗಳ ವಿಶೇಷ ನ್ಯಾಯಾಲಯವು ದಾಖಲೆಗಳ ಪರಿಶೀಲನೆಯ ನಂತರ ಈ ಚಾರ್ಜ್‍ಶೀಟ್ ಅನ್ನು ಪರಿಶೀಲನೆಗೆ ತೆಗೆದುಕೊಳ್ಳುತ್ತದೆ ಎಂದು ಇಡಿ ಪರ ವಕೀಲರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಇಡಿಯಿಂದ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅರೆಸ್ಟ್
Advertisement
Money laundering case | Amir Malik & Faraz Mailk, sons of NCP leader & Maharashtra minister Nawab Malik, have failed to appear before Enforcement Directorate even after they were summoned multiple times by the agency. "Nawab Mailk's family not cooperating in the probe" ED said.
— ANI (@ANI) April 21, 2022
Advertisement
20 ವರ್ಷಗಳ ಹಿಂದೆ ಮುಂಬೈನ ಕುರ್ಲಾದಲ್ಲಿ 2.75 ಎಕರೆ ಜಾಗಕ್ಕಾಗಿ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪರ್ಕರ್‌ಗೆ ನವಾಬ್ ಮಲಿಕ್ 55 ಲಕ್ಷ ರೂ. ನಗದು ನೀಡಿದ್ದರು ಎಂದು ಇಡಿ ಮಾಹಿತಿ ಕಲೆಹಾಕಿದ್ದು, ಈ ಸಂಬಂಧ ಇಡಿ ಫೆ.23 ರಂದು ಮಲಿಕ್‍ರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. ಇದನ್ನೂ ಓದಿ: ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ಪ್ರಾಚೀನ ಕಾಲದ ದೇವಸ್ಥಾನ ಪತ್ತೆ
Advertisement
ಇಡಿ ಫೆ.23 ರಂದು ಬಂಧಿಸಿದ ಬಳಿಕ ಫೆ.25 ರಂದು ಆನಾರೋಗ್ಯ ಕಾರಣದಿಂದ ನವಾಬ್ ಮಲಿಕ್ ಆಸ್ಪತ್ರೆ ದಾಖಲಾಗಿದ್ದರು. ನಂತರ ಇದೀಗ ನ್ಯಾಯಾಂಗ ಬಂಧನದಲ್ಲಿರುವ ಮಲಿಕ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದರೂ ಜಾಮೀನು ಅರ್ಜಿ ವಜಾಗೊಂಡಿದೆ.