ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ(ಇಡಿ) ಹೊಸ ಸಮನ್ಸ್ ಜಾರಿ ಮಾಡಿದೆ. ಈ ಹಿಂದೆ ಜೂನ್ 2 ರಂದು ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ್ದು, ಆದರೆ ರಾಹುಲ್ ಗಾಂಧಿ ಹೆಚ್ಚಿನ ಸಮಯಾವಕಾಶ ಕೋರಿದ್ದರಿಂದ ಜೂನ್ 13ಕ್ಕೆ ಹೊಸ ನೋಟಿಸ್ ಜಾರಿ ಮಾಡಿದೆ.
Advertisement
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಅವರಿಗೆ ಇಡಿ ನೋಟಿಸ್ ನೀಡಿದ್ದು, ಏಜೆನ್ಸಿಯ ಮುಂದೆ ಹಾಜರಾಗುವಂತೆ ಸೂಚಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿಗೂ ಕೊರೊನಾ
Advertisement
ಇಡಿ ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ ಸೋನಿಯಾ ಗಾಂಧಿಗೆ ಕೊರೊನಾ ಕಂಡುಬಂದಿದ್ದು, ಆದರೂ ಅವರು ಜೂನ್ 8 ರಂದು ಇಡಿ ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ.
Advertisement
Advertisement
2012 ರಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫೆರ್ನಾಂಡಿಸ್, ಸುಮನ್ ದುಬೆ ಮತ್ತು ಸ್ಯಾಮ್ ಪಿತ್ರೋಡಾ ವಿರುದ್ಧ ದೂರು ಸಲ್ಲಿಸಿದ್ದರು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಪಡೆಯುವಲ್ಲಿ ವಂಚನೆ ಮಾಡಲಾಗಿದ್ದು, ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ತನಿಖೆಗೆ ಮನವಿ ಮಾಡಿದ್ದರು. ಇದನ್ನೂ ಓದಿ: ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕಬೇಕಿಲ್ಲ, ಇನ್ಮುಂದೆ ಮಂದಿರ ಹೋರಾಟದಲ್ಲಿ ನಾವಿಲ್ಲ: ಮೋಹನ್ ಭಾಗವತ್