ಬೆಂಗಳೂರು: ಐಶ್ವರ್ಯಗೌಡ (Aishwarya Gowda) ವಂಚನೆ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ (D.K.Suresh) ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಕೊಟ್ಟಿದೆ.
ಐಶ್ವರ್ಯಗೌಡ ಕೇಸ್‌ನಲ್ಲಿ ಈಗಾಗಲೇ ಶಾಸಕ ವಿನಯ್ ಕುಲಕರ್ಣಿ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಡಿ.ಕೆ.ಸುರೇಶ್‌ಗೆ ಇ.ಡಿ ಶಾಕ್ ಕೊಟ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ವಿಸ್ಕಿ ಪ್ರಚಾರ ಮಾಡೋದಕ್ಕೆ RCB ಸಂಭ್ರಮ ಕಾರ್ಯಕ್ರಮ ಮಾಡಿದ್ರಾ?: ಸಿ.ಟಿ.ರವಿ ವಾಗ್ದಾಳಿ

ಈ ಕುರಿತು ಪ್ರತಿಕ್ರಿಯಿಸಿರುವ ಡಿಕೆ ಸುರೇಶ್, ಮಧ್ಯಾಹ್ನ 12-30 ಗಂಟೆಗೆ ಇ.ಡಿಯವರು ಬಂದು ಸಮನ್ಸ್ ನೀಡಿದ್ದಾರೆ. ನಾನು ಹೊರಗೆ ಹೋಗಿದ್ದೆ ಇಡಿಯವರು ಬಂದಿದ್ದಾರೆ ಎಂದು ಗೊತ್ತಾದ ಮೇಲೆ ಬಂದೆ. ಅವರು ಸಮನ್ಸ್ ಕೊಟ್ಟಿದ್ದಾರೆ. ಸಮನ್ಸ್ನಲ್ಲಿ ಯಾವ ಪ್ರಕರಣ ಅಂತ ಇಲ್ಲ. ಆದರೆ, ದಾಖಲಾತಿ ನೋಡಿದಾಗ ಈ ಪ್ರಕರಣ ಅಂತ ಗೊತ್ತಾಯ್ತು ಎಂದು ತಿಳಿಸಿದ್ದಾರೆ.
ಗುರುವಾರ ಬನ್ನಿ ಅಂದಿದ್ದಾರೆ. ಆದರೆ ಪೂರ್ವ ನಿಯೋಜಿತ ಕಾರ್ಯಕ್ರಮ ಇದೆ. ಅದಕ್ಕೆ ಸೋಮವಾರ ಬರುತ್ತೇನೆ ಎಂದು ಮೌಕಿಕವಾಗಿ ತಿಳಿಸಿದ್ದೇನೆ. ಈಗ ಇ-ಮೇಲ್ ಮೂಲಕ ಅಧಿಕೃತವಾಗಿ ತಿಳಿಸುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: EXCLUSIVE | ಲೋಕಾಯುಕ್ತ ಲಂಚ ಪ್ರಕರಣಕ್ಕೆ ಡೈರಿ ಮಿಸ್ಟರಿ – ನಿಂಗಪ್ಪ ಮನೆಯಲ್ಲಿದ್ದ 2 ಡೈರಿ ರಿಕವರಿ
ನಾನು ಯಾವುದೇ ವ್ಯವಹಾರ ನಡೆಸಿಲ್ಲ. ಅವರು (ಐಶ್ವರ್ಯಗೌಡ) ನಮ್ಮ ಕ್ಷೇತ್ರದವರು ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೆ. ನನ್ನ ತಂಗಿ ಅಂತಾ ಹೇಳಿಕೊಂಡು ಒಡಾಡುವುದರ ಬಗ್ಗೆ ನಾನೇ ದೂರು ಕೊಟ್ಟಿದ್ದೇನೆ. ಇ.ಡಿಯವರು 7-8 ದಾಖಲೆಗಳನ್ನು ಕೇಳಿದ್ದಾರೆ. ನನ್ನ ಬಳಿ ದಾಖಲೆ ಕೇಳಿದ್ದು ಅಸಂಬದ್ಧ. ಇ.ಡಿ ವಿಚಾರಣೆಗೆ ಹೋದಾಗ ಅಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.
 

 
		 
		 
		 
		 
		
 
		 
		 
		 
		