MUDA Scam| ಸಿಎಂಗೆ ಸಂಕಷ್ಟ – ವಿಚಾರಣೆಗೆ ಹಾಜರಾಗುವಂತೆ ಪತ್ನಿಗೆ ಇಡಿ ಸಮನ್ಸ್‌

Public TV
1 Min Read
siddaramaiah muda scam

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೈಟ್‌ ಹಗರಣ (MUDA Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಈಗ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದೆ.

ಜ. 23 ರಂದು ಇಡಿ ನೋಟಿಸ್‌ ಜಾರಿ ಮಾಡಿದ್ದ ಇಡಿ ಜ.27 ರಂದು (ಇಂದು) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇಂದು ಬೆಳಗ್ಗೆ ಹೈಕೋರ್ಟ್‌ನಲ್ಲಿ ಪಾರ್ವತಿ (Parvathi) ಮತ್ತು ಬೈರತಿ ಸುರೇಶ್‌ (Byrathi Suresh) ಅವರು ಇಡಿ ನೋಟಿಸ್‌ ನೀಡಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆಗೆ ಬರಲಿದೆ. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂ ಬಾಮೈದನಿಗೆ ಇಡಿ ವಿಚಾರಣೆ – ಸತತ 4 ಗಂಟೆ ಡ್ರಿಲ್

ಗುರುವಾರ (ಜ.23) ಬೆಳಗ್ಗೆ ಸಿಎಂ ಕುಟುಂಬಕ್ಕೆ ಲೋಕಾಯುಕ್ತದಿಂದ ಕ್ಲೀನ್ ಚಿಟ್ ಎಂದು ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಕೇಳಿದ ಪ್ರಶ್ನೆಗೆ ನನಗೇನೂ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆ ಬಳಿಕ ಗುರುವಾರ ಸಂಜೆಯೇ ಸಿಎಂ ಪತ್ನಿ ಪಾರ್ವತಿ ಅವರಿಗೆ ಇಡಿ ಸಮನ್ಸ್‌ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇದನ್ನೂ ಓದಿ: MUDA ಅಕ್ರಮದಲ್ಲಿ ʼಕೋಕನಟ್‌ʼ ಡೀಲ್‌ – 50, 100 ಕೋಕನಟ್‌ ಕಳುಹಿಸಿ ಸಿಕ್ಕಿಬಿದ್ದ ಬಿಲ್ಡರ್‌

ಈಗಾಗಲೇ ಸಿಎಂ ಪತ್ನಿ ಅವರು ತನಗೆ ನೀಡಿದ 14 ಸೈಟ್‌ಗಳು ಮುಡಾಗೆ ಮರಳಿಸಿದ್ದಾರೆ. ಲೋಕಾಯುಕ್ತ, ಇಡಿಯಲ್ಲಿ ಎಫ್‌ಐಆರ್‌ ಬೆನ್ನಲ್ಲೇ ಕಳೆದ ಸೆ.30 ರಂದು 14 ನಿವೇಶನ ಹಿಂದಿರುಗಿಸುವುದಾಗಿ ಮುಡಾ ಆಯುಕ್ತರಿಗೆ ಪಾರ್ವತಿ ಅವರು ಪತ್ರ ಬರೆದಿದ್ದರು.

Share This Article