ನವದೆಹಲಿ: ಈ ಹಿಂದೆ ಇ.ಡಿ ವಿಚಾರಣೆಗೆ ಒಳಪಟ್ಟಿದ್ದ ಕಾಂಗ್ರೆಸ್ ನಾಯಕ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರಿಗೆ ಮತ್ತೆ ನೋಟಿಸ್ ನೀಡಲಾಗಿದೆ.
ಆಗಸ್ಟ್ 1ನೇ ತಾರೀಖು ವಿಚಾರಣೆಗೆ ಹಾಜರಾಗುವಂತೆ ಕೆಜಿಎಫ್ ಬಾಬುಗೆ ಇ.ಡಿ ನೋಟಿಸ್ ನೀಡಿದೆ. ದೆಹಲಿ ಇ.ಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಪರಿಷತ್ ಚುನಾವಣೆಗೂ ಮುನ್ನ ಕೆಜಿಎಫ್ ಬಾಬು ಅವರು ಇ.ಡಿ ವಿಚಾರಣೆಗೆ ಒಳಪಟ್ಟಿದ್ದರು. ಈ ವೇಳೆ ಪರಿಷತ್ ಚುನಾವಣೆ ಬಗ್ಗೆ ಹತ್ತಾರು ಪ್ರಶ್ನೆಗಳನ್ನು ಇಡಿ ಅಧಿಕಾರಿಗಳು ಕೇಳಿದ್ದರು. ಇದನ್ನೂ ಓದಿ: ಪ್ರವೀಣ್ ಹತ್ಯೆ ಬಳಿಕ ನಮ್ಮ ನಾಯಕರು ತಲೆಯೆತ್ತಿ ಓಡಾಡೋಕೆ ಆಗ್ತಿಲ್ಲ – ವಿಜಯೇಂದ್ರ
ಮೇ 28 ರಂದು ನಡೆದ ಇ.ಡಿ ದಾಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಈ ಹಿಂದೆ ಕೆಜಿಎಫ್ ಬಾಬುಗೆ ಸಮನ್ಸ್ ನೀಡಲಾಗಿತ್ತು. ಈಗ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಕಳೆದ ವರ್ಷ ನಡೆದಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಸಾವಿರಾರು ಕೋಟಿ ಒಡೆಯ ಯೂಸುಫ್ ಷರೀಫ್ ಸೋಲನುಭವಿಸಿದ್ದರು. ಬೆಂಗಳೂರು ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆಜಿಎಫ್ ಬಾಬು ಬಿಜೆಪಿ ಅಭ್ಯರ್ಥಿ ವಿರುದ್ಧ ಸೋತಿದ್ದರು. ಇದನ್ನೂ ಓದಿ: ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ