ಬೆಂಗಳೂರು: ಮುಡಾದಲ್ಲಿ (MUDA) ನನ್ನ ಪತ್ನಿಗೆ ಇಡಿ ಕೊಟ್ಟಿರುವ ನೋಟಿಸ್ ರಾಜಕೀಯ ಪ್ರೇರಿತ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.
ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕೇಸ್‌ನಲ್ಲಿ ನನ್ನ ಪತ್ನಿಗೆ ಇಡಿಯವರು ನೋಟಿಸ್ ಕೊಟ್ಟಿದ್ದರು. ಅದಕ್ಕೆ ಹೈಕೋರ್ಟ್ ತಡೆ ನೀಡಿದೆ. ಯಾಕೆ ಇಷ್ಟು ಆತುರ ಮಾಡ್ತಿದ್ದೀರಾ? ತನಿಖೆ ನಡೆಯುತ್ತಿದೆ. ಸಿಬಿಐಗೆ ಕೊಡಬೇಕಾ? ಬೇಡವಾ? ಎನ್ನುವ ಬಗ್ಗೆ ಚರ್ಚೆ ಆಗ್ತಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಹೀಗಾಗಿ ಬಗ್ಗೆ ಆದೇಶ ಕಾಯ್ದಿರಿಸಿದೆ. ಈ ಹಂತದಲ್ಲಿ ನೀವು ಆತುರ ಮಾಡುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ. ಹೀಗಾಗಿ ಕೋರ್ಟ್ ತಡೆ ಕೊಟ್ಟಿದೆ ಎಂದರು.ಇದನ್ನೂ ಓದಿ: 2ನೇ ಮದುವೆಗೆ ಸಜ್ಜಾದ ಚೈತ್ರಾ ವಾಸುದೇವನ್
ಇಡಿ ನೋಟಿಸ್ ರಾಜಕೀಯ ಪ್ರೇರಿತನಾ ಎಂಬ ಪ್ರಶ್ನೆಗೆ ಉತ್ತರಿದ ಅವರು, ಇಡಿ ನೋಟಿಸ್ ರಾಜಕೀಯ ಪ್ರೇರಿತವಲ್ಲದೇ ಇನ್ನೇನು? ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದರು.
ಇನ್ನೂ ಮುಡಾ ಕೇಸ್ ಸಿಬಿಐಗೆ ತನಿಖೆ ಕೊಡುವ ಬಗ್ಗೆ ಆತಂಕ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನ್ಯಾಯಾಧೀಶರು ಏನು ಮಾಡುತ್ತಾರೆ ಎಂದು ಗೊತ್ತಿಲ್ಲ. ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದಾರೆ. ನನಗೆ ಯಾಕೆ ಆತಂಕ ಆಗುತ್ತದೆ. ನನಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತೆ ಎಂದು ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇದನ್ನೂ ಓದಿ: ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ