ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಮುಂಬೈನ ವಿವಿಧ ತಾಣಗಳಿಗೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಭೇಟಿ ನೀಡಿ ಶೋಧ ಕಾರ್ಯ ನಡೆಸಿದ್ದಾರೆ.
Advertisement
ಮುಂಬೈನ ಸುಮಾರು 10 ತಾಣಗಳಲ್ಲಿ ಇ.ಡಿ ಶೋಧಾ ಕಾರ್ಯ ನಡೆಸುತ್ತಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಶೋಧ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ಬಹುಕೋಟಿ ಮೇವು ಹಗರಣ, ಲಾಲೂ ಪ್ರಸಾದ್ ಯಾದವ್ ದೋಷಿ – CBI ಕೋರ್ಟ್
Advertisement
ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ಅವರ ಸೀಲ್ ಮಾಡಿದ ನಿವಾಸವನ್ನೂ ತೆರೆದು ಇ.ಡಿ ಅಧಿಕಾರಿಗಳು ಮನೆಯೊಳಗೆ ಶೋಧ ಕಾರ್ಯ ನಡೆಸಿದ್ದಾರೆ. ಅಲ್ಲದೇ ಪ್ರಕರಣದಲ್ಲಿ ನಂಟು ಹೊಂದಿರುವ ರಾಜಕಾರಣಿಯೊಬ್ಬರ ಮನೆಯಲ್ಲೂ ಶೋಧ ನಡೆಸಿದ್ದಾರೆ.
Advertisement
Advertisement
ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಅಪರಾಧಿಗಳ ಪಟ್ಟಿಯಲ್ಲಿ ದಾವೂದ್ ಇಬ್ರಾಹಿಂ ಹೆಸರಿದೆ. ಈತ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆ ಇದೆ. ಇದನ್ನೂ ಓದಿ: ರಾಹುಲ್ ವಿರುದ್ಧ ಹಿಮಂತ ಬಿಸ್ವಾ ವಿವಾದಾತ್ಮಕ ಹೇಳಿಕೆ – ತೆಲಂಗಾಣ ಕಾಂಗ್ರೆಸ್ ನಾಯಕರಿಂದ ದೂರು