ಶಿವಮೊಗ್ಗ: ನಗರದಲ್ಲಿ ಏಕಕಾಲಕ್ಕೆ 3 ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್ (DCC Bank) ಅಧ್ಯಕ್ಷರಿಗೆ ಸೇರಿದ ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ.
ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌ಎಂ ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಜಾನೆಯೇ 2 ಕಾರಿನಲ್ಲಿ ಆಗಮಿಸಿದ ಅಧಿಕಾರಿಗಳು ಮನೆಗೆ ಬೀಗ ಹಾಕಿದ್ದ ಹಿನ್ನೆಲೆ ಹೊರಗಡೆ ಕಾದು ಕುಳಿತಿದ್ದಾರೆ. ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಕೈಕೊಟ್ಟ ಮಳೆ – ಕೆಆರ್‌ಎಸ್ ಒಳಹರಿವಿನಲ್ಲಿ ಕುಸಿತ
ಮಂಜುನಾಥ್ ಅವರಿಗೆ ಸೇರಿದ ಒಟ್ಟು 3 ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬೆಟ್ಟಮಕ್ಕಿಯಲ್ಲಿರುವ ನಿವಾಸ, ಶಿವಮೊಗ್ಗದ ಶರಾವತಿ ನಗರದಲ್ಲಿರುವ ನಿವಾಸ ಹಾಗೂ ಕರಿಕುಚ್ಚಿ ಗ್ರಾಮದ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಂದ್ರೆ ಹಿಂದೂ ವಿರೋಧಿ ಅನ್ನೋದು ಸ್ಪಷ್ಟವಾಗಿದೆ: ಅಶ್ವಥ್ ನಾರಾಯಣ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]