ತಮಿಳಿನ (Tamil) ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆಯ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) (ED Raid) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಣಿರತ್ನಂ ನಿರ್ದೇಶನದಲ್ಲಿ ಮೂಡಿ ಬಂದಿರುವ ಪೊನ್ನಿಯಿನ್ ಸೆಲ್ವನ್ (Ponniyin Selvan) ಸಿನಿಮಾ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿರುವ ಬೆನ್ನಲ್ಲೇ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಹಲವು ಗಂಟೆಗಳಿಂದ ಸಂಸ್ಥೆ ಹಾಗೂ ಮಾಲೀಕರ ಮನೆ ಮೇಲೂ ದಾಳಿ ಮಾಡಿದ್ದಾರಂತೆ.
Advertisement
ಲೈಕಾ ಪ್ರೊಡಕ್ಷನ್ ((Lyca Production)) ದಕ್ಷಿಣ ಭಾರತದ ಅತ್ಯಂತ ದೊಡ್ಡ ನಿರ್ಮಾಣ ಸಂಸ್ಥೆ. ತಮಿಳಿನ ಬಹುತೇಕ ಸ್ಟಾರ್ ನಟರ ಚಿತ್ರಗಳಿಗೆ ಈ ಸಂಸ್ಥೆ ಹಣ ಹೂಡಿದೆ. ಪೊನ್ನಿಯಿನ್ ಸೆಲ್ವನ್ ಸಿನಿಮಾ ನಿರ್ಮಾಣಕ್ಕಾಗಿಯೇ ಅದು 600 ಕೋಟಿ ರೂಪಾಯಿಗೂ ಹೆಚ್ಚು ಹಣ ಹೂಡಿತ್ತು. ಈ ಸಿನಿಮಾ ಎರಡು ಭಾಗಗಳಲ್ಲಿ ಮೂಡಿ ಬಂದಿತ್ತು. ಎರಡೂ ಭಾಗಗಳೂ ಸೂಪರ್ ಹಿಟ್ ಆಗಿವೆ. ಎಂಟು ನೂರು ಕೋಟಿಗೂ ಅಧಿಕ ಹಣವನ್ನು ವಾಪಸ್ಸು ತಂದುಕೊಟ್ಟಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಮುಂದಿನ ಪೀಳಿಗೆಯೂ ಕೊಲ್ಲೂರಿಗೆ ಬರಬೇಕಂದ್ರೆ ‘ದಿ ಕೇರಳ ಸ್ಟೋರಿ’ ಮೂವಿ ನೋಡಿ
Advertisement
Advertisement
ಲೈಕಾ ಪ್ರೊಡಕ್ಷನ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದ್ದರಿಂದ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಸಂಸ್ಥೆಗೆ ಸೇರಿದ ಒಟ್ಟು ಎಂಟು ಕಚೇರಿಗಳ ಮೇಲೆ ಇಡಿ ದಾಳಿ ನಡೆದಿದೆ. 2014ರಿಂದ ಈ ಸಂಸ್ಥೆಯನ್ನು ಪ್ರಾರಂಭಿಸಿರುವ ಎ ಸುಭಾಸ್ಕರನ್ (A. Subhaskaran) ಇದರ ಮಾಲೀಕರು. ಕತ್ತಿ, ದಿಯಾ, 2.0, ಡಾನ್ ಸೇರಿದಂತೆ ಸಾಕಷ್ಟು ಚಿತ್ರಗಳನ್ನು ಈ ಸಂಸ್ಥೆ ನಿರ್ಮಾಣವಾಗಿದೆ.