ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ಗೆ ಸಂಬಂಧಿಸಿದ ಪ್ರಧಾನ ಕಚೇರಿ ಸೇರಿ ಹಲವು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ಎಸ್‌ಡಿಪಿಐ (SDPI) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿ ಬಂಧನದ ಬೆನ್ನಲ್ಲೇ ಇಡಿ ದಾಳಿ ನಡೆಸಿದೆ. ನವದೆಹಲಿಯಲ್ಲಿರುವ ಎಸ್‌ಡಿಪಿಐ ಪ್ರಧಾನ ಕಚೇರಿ, ಕೇರಳದ ತಿರುವನಂತಪುರಂ ಮತ್ತು ಮಲಪ್ಪುರಂ, ಬೆಂಗಳೂರು, ಆಂಧ್ರಪ್ರದೇಶದ ನಂದ್ಯಾಲ್, ಥಾಣೆ, ಚೆನ್ನೈ, ಜಾರ್ಖಂಡ್‌ನ ಪಾಕೂರ್, ಕೋಲ್ಕತ್ತಾ, ಲಕ್ನೋ ಮತ್ತು ಜೈಪುರ ಸೇರಿದಂತೆ 12 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದೆ. ಇದನ್ನೂ ಓದಿ: ಹಾಸನ| ರಸ್ತೆ ವಿಚಾರಕ್ಕೆ ಸೈನಿಕ, ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ
Advertisement
Advertisement
ಎಸ್‌ಡಿಪಿಐಯು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಅಂಗವಾಗಿದೆ. ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ, 2022ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಪಿಎಫ್‌ಐ ಅನ್ನು ಕಾನೂನುಬಾಹಿರ ಸಂಘವೆಂದು ಘೋಷಿಸಿತ್ತು. ಎಸ್‌ಡಿಪಿಐಯು ಭಾರತದ ಚುನಾವಣಾ ಆಯೋಗದಲ್ಲಿ ರಾಜಕೀಯ ಪಕ್ಷವಾಗಿ ನೋಂದಾಯಿಸಲ್ಪಟ್ಟ ಹಿನ್ನೆಲೆ ನಿಷೇಧ ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: ಒಂದೂವರೆ ತಿಂಗಳ ಮಗುವಿಗೆ 2 ವರ್ಷ ಅವಧಿ ಮುಗಿದ ಲಸಿಕೆ ಹಾಕಿದ ವೈದ್ಯ
Advertisement
ಪಿಎಫ್‌ಐ ನಿಷೇಧದ ಬಳಿಕ 2009ರಲ್ಲಿ ಸ್ಥಾಪನೆಯಾದ ಮತ್ತು ದೆಹಲಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಎಸ್‌ಡಿಪಿಐ ಮೂಲಕ ಪಿಎಫ್‌ಐ ತನ್ನ ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಇಡಿ ಆರೋಪಿಸಿದೆ. ಇದಕ್ಕೆ ಪೂರಕ ಎನ್ನುವಂತೆ ಪಿಎಫ್‌ಐ ಬ್ಯಾಂಕ್ ಖಾತೆಗಳಿಂದ ಎಸ್‌ಡಿಪಿಐಗೆ ಭಾರೀ ಪ್ರಮಾಣದ ಹಣ ವರ್ಗಾವಣೆಯಾಗಿರುವುದು ಕಂಡುಬಂದಿದೆ. ಇದನ್ನೂ ಓದಿ: ಕಮ್ಯೂನಲ್ ಕ್ರಿಮಿನಲ್‌ಗಳಿಗೆ ಸಪೋರ್ಟ್ ಮಾಡುವ ರಾಜನೀತಿ ದೇಶಕ್ಕೆ ಅಪಾಯಕಾರಿ: ಸಿ.ಟಿ.ರವಿ
Advertisement
ಈ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ಮಾಡಲು ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿ ಅವರನ್ನು ಮಾ. 3ರಂದು ಬಂಧಿಸಿರುವ ಇಡಿ ಅಧಿಕಾರಿಗಳು ಎಸ್‌ಡಿಪಿಐ ಮತ್ತು ನಿಷೇಧಿತ ಪಿಎಫ್‌ಐ ನಡುವಿನ ಆರ್ಥಿಕ ವ್ಯವಹಾರಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ದಾಳಿಯ ಮೂಲಕ ಎಸ್‌ಡಿಪಿಐ ಆರ್ಥಿಕ ವ್ಯವಹಾರಗಳನ್ನು ಇಡಿ ಪರಿಶೀಲಿಸುತ್ತಿದೆ.