ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತ ಎನ್ನಲಾದ ಪ್ರೇಮ್ ಪ್ರಕಾಶ್ ಅವರ ನಿವಾಸದಲ್ಲಿ ಬುಧವಾರ ಜಾರಿ ನಿರ್ದೇಶನಾಲಯ ದಾಳಿ ನಡೆಸಿ, 2 ಎಕೆ-47 ರೈಫಲ್ಗಳನ್ನು ವಶಪಡಿಸಿಕೊಂಡಿದೆ.
100 ಕೋಟಿ ಗಣಿ ಹಗರಣದ ತನಿಖೆಯ ಭಾಗವಾಗಿ ನಡೆಸಿದ ದಾಳಿ ವೇಳೆ ಜಾರಿ ನಿರ್ದೇಶನಾಲಯ ಪ್ರಕಾಶ್ ಅವರ ರಾಂಚಿಯಲ್ಲಿರುವ ಮನೆಯಿಂದ 2 ಎಕೆ-47 ರೈಫಲ್ಗಳನ್ನು ವಶಪಡಿಸಿಕೊಂಡಿದೆ. ಆದರೆ ಹಗರಣದ ಬಗ್ಗೆ ಪ್ರಕಾಶ್ ಅಥವಾ ಸೊರೇನ್ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಬಿಹಾರ ಸ್ಪೀಕರ್ ಸ್ಥಾನಕ್ಕೆ ವಿಜಯ್ ಕುಮಾರ್ ಸಿನ್ಹಾ ರಾಜೀನಾಮೆ
Advertisement
Advertisement
ದಾಳಿ ವೇಳೆ ಕಪಾಟಿನೊಳಗಡೆ ರೈಫಲ್ಗಳು ಕಂಡುಬಂದಿದ್ದು, ಅವು ಕಾನೂನು ಬಾಹಿರವಾಗಿ ಇಟ್ಟುಕೊಳ್ಳಲಾಗಿದೆಯೇ ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ. ಆದರೆ ಇಡಿ ಅದನ್ನು ವಶಪಡಿಸಿಕೊಂಡಿದೆ. ಜಾರ್ಖಂಡ್, ಬಿಹಾರ, ತಮಿಳುನಾಡು ಮತ್ತು ದೆಹಲಿ-ಎನ್ಸಿಆರ್ನ 20 ಸ್ಥಳಗಳಲ್ಲಿ ದಾಳಿ ನಡೆಸಿರುವುದಾಗಿ ಇಡಿ ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ಕಾಂಗ್ರೆಸ್ನ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ