ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಪತ್ನಿ ಪೂನಂ ಜೈನ್ ಹಾಗೂ ಸಹಚರರ ಮನೆಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಶೋಧ ಕಾರ್ಯ ನಡೆಸಿ, 2.85 ಕೋಟಿ ರೂ. ನಗದು ಹಾಗೂ 1.8 ಕೆಜಿಯಷ್ಟು ಚಿನ್ನವನ್ನು ವಶಪಡಿಸಿಕೊಂಡಿದೆ.
Advertisement
ಸತ್ಯೇಂದ್ರ ಜೈನ್ ತಮ್ಮ ಪತ್ನಿ, ಪುತ್ರಿಯರು, ಸ್ನೇಹಿತರು ಹಾಗೂ ಸಹಚರರ ಸಹಾಯದಿಂದ 16 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಹೊತ್ತಿದ್ದಾರೆ. ಮೇ 20 ರಂದು ಸತ್ಯೇಂದ್ರ ಜೈನ್ ಅವರನ್ನು ಇಡಿ ಬಂಧಿಸಿತ್ತು. ಪ್ರಸ್ತುತ ಸತ್ಯೇಂದ್ರ ಜೈನ್ ಇಡಿ ವಶದಲ್ಲಿದ್ದಾರೆ. ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರ – ತಮಿಳುನಾಡಿನಿಂದ ಹೊಸ ತಕರಾರು
Advertisement
ಶೋಧ ಕಾರ್ಯದ ವೇಳೆ ಸಿಕ್ಕಿರುವ 500 ಹಾಗೂ 2,000 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳನ್ನು ಜೋಡಿಸಿ `ಇಡಿ’ ಎಂದು ವಿನ್ಯಾಸಗೊಳಿಸಲಾಗಿದೆ. ನೋಟಿನ ಕಂತೆಗಳಿಂದಲೇ ಇಡಿ ಎಂದು ವಿನ್ಯಾಸಗೊಳಿಸಿ ತೆಗೆದಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
Advertisement
Advertisement
2015 ಫೆಬ್ರವರಿಯಿಂದ 2017ರ ಮೇ ತಿಂಗಳಿನ ವರೆಗೆ ದೆಹಲಿ ಸರ್ಕಾರದ ಸಚಿವರಾಗಿದ್ದ ಸತ್ಯೇಂದ್ರ ಜೈನ್ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿ, 2018ರಲ್ಲಿ ಪ್ರಕರಣ ದಾಖಲಿಸಿತ್ತು. ಇದೀಗ ಇಡಿ, ಸಿಬಿಐ ದಾಖಲಿಸಿರುವ ಎಫ್‌ಐಆರ್ ಆಧಾರದ ಮೇಲೆ ಐಪಿಸಿ ಸೆಕ್ಷನ್ 109 ಹಾಗೂ ಸೆಕ್ಷನ್ 13(2)ರ ಅಡಿ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಆಮ್ ಆದ್ಮಿ ಪಾರ್ಟಿ ಸೇರಿಕೊಂಡ ‘ಮುಖ್ಯಮಂತ್ರಿ’