ಬೆಂಗಳೂರು: ಸಂಸದ ಡಿ.ಕೆ.ಸುರೇಶ್ ಗೆ ಇಡಿ ಸಮನ್ಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.
ಈಗಾಗಲೇ ವಿಚಾರಣೆಗೆ ಎಂದು ತೆರಳಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮೊದಲು ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವರನ್ನು ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು. ಇದೀಗ ಸೋದರ ಡಿ.ಕೆ.ಸುರೇಶ್ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದೆ.
Advertisement
ಸಮನ್ಸ್ ಹಿನ್ನೆಲೆಯಲ್ಲಿ ಡಿ.ಕೆ.ಸುರೇಶ್ ಇಡಿ ಅಧಿಕಾರಿಗಳ ಮುಂದೆ ಮಂಗಳವಾರ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ ಇಡಿ ಕೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 14ಕ್ಕೆ ಮುಂದೂಡಿದೆ.
Advertisement
Advertisement