ಬಾಲಿವುಡ್ ನ ಖ್ಯಾತ ನಟ, ಹಾಸ್ಯ ನಿರೂಪಕ ಕಪಿಲ್ ಶರ್ಮಾ (Kapil Sharma) ಅವರಿಗೂ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದೆ. ಮಹದೇವ್ ಆನ್ ಲೈನ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ (Notice) ಜಾರಿ ಮಾಡಿದ್ದು, ಇಂದು ಜಾರಿ ನಿರ್ದೇಶನಾಲಯದ ಎದುರು ಕಪಿಲ್ ಹಾಜರಾಗುವ ಸಾಧ್ಯತೆ ಇದೆ.
Advertisement
ಕೇವಲ ಕಪಿಲ್ ಶರ್ಮಾಗೆ ಮಾತ್ರವಲ್ಲ, ರಣಬೀರ್ ಕಪೂರ್, ಶ್ರದ್ಧಾ ಕಪೂರ್ (Shraddha Kapoor), ಹುಮಾ ಖುರೇಷಿ ಹಾಗೂ ಹೀನಾ ಖಾನ್ ಸೇರಿದಂತೆ ಹಲವರಿಗೆ ಇಡಿ ನೋಟಿಸ್ ನೀಡಿದೆ. ಈ ಪ್ರಕರಣದಲ್ಲಿ ಒಟ್ಟು 17 ಬಾಲಿವುಡ್ ಸಿಲಿಬ್ರಿಟಿಗಳಿಗೆ ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹಂತ ಹಂತವಾಗಿ ಇವರನ್ನು ವಿಚಾರಣೆಗೆ ಕರೆಯಲಾಗುತ್ತಿದೆ.
Advertisement
Advertisement
ಏನಿದು ಪ್ರಕರಣ?
Advertisement
ಮಹದೇವ್ ಬೆಟ್ಟಿಂಗ್ (Mahadev Betting) ಆಪ್‍ನ ಮುಖ್ಯಸ್ಥನ ಸೌರಭ್ ಚಂದ್ರಕರ್ ಅವರ ಮದುವೆ ಅದ್ಧೂರಿಯಾಗಿ ದುಬೈನಲ್ಲಿ ನಡೆದಿತ್ತು. ಮುಂಬೈ ಮೂಲದ ಇವೆಂಟ್ ಮ್ಯಾನೇಜ್ ಮೆಂಟ್ ಕಂಪೆನಿಗೆ ಮದುವೆಯ ಉಸ್ತುವಾರಿ ನೀಡಿತ್ತು. ಈ ಇವೆಂಟ್ ಮ್ಯಾನೇಜ್ ಮೆಂಟ್ ಹಲವಾರು ಸಿಲಿಬ್ರಿಟಿಗಳನ್ನು ಮದುವೆಗೆ ಆಹ್ವಾನ ನೀಡಿತ್ತು. ಇವೆಂಟ್ ಮ್ಯಾನೇಜ್ ಮೆಂಟ್ ಕಂಪೆನಿಗೆ ಸೌರಭ್ 140 ಕೋಟಿ ರೂಪಾಯಿ ಹವಾಲ ಹಣ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಿಲಿಬ್ರಿಟಿಗಳಿಗೂ ಈ ಹಣ ಪಾವತಿ ಆಗಿರುವುದರಿಂದ ಹಣ ಪಡೆದವರಿಗೆ ನೋಟಿಸ್ ನೀಡಿ, ವಿಚಾರಣೆ ಮಾಡಲಾಗುತ್ತಿದೆ. ಒಟ್ಟು ಈ ಮದುವೆಗೆ 200 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಇಡಿ ತನಿಖೆಯಿಂದ ತಿಳಿದು ಬಂದಿದೆ. ಇದಷ್ಟೇ ಅಲ್ಲ, ಈ ಆಪ್ ಅನ್ನು ಪ್ರಮೋಟ್ ಮಾಡಿದ 100ಕ್ಕೂ ಹೆಚ್ಚು ಜನರಿಗೂ ನೋಟಿಸ್ ನೀಡುವ ಸಾಧ್ಯತೆ ಇದೆ.
Web Stories