ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮತ್ತೆ ಜಾರಿ ನಿರ್ದೇಶನಾಲಯದ ಟೆನ್ಷನ್ ಶುರುವಾಗಿದೆ. ಜಾರಿ ನಿರ್ದೇಶನಾಲಯವು (ED) ಜುಲೈ 21ರಂದು ತನಿಖೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ವಿಚಾರಣೆಗೆ ಒಳಪಡಿಸಿದೆ.
Advertisement
Advertisement
ಕಳೆದ ತಿಂಗಳಿನಲ್ಲಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಇ.ಡಿ ವಿಚಾರಣೆಗೆ ಕರೆದಿತ್ತು. ಇದೇ ವೇಳೆ ಸೋನಿಯಾರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. 75 ವರ್ಷ ವಯಸ್ಸಿನ ಸೋನಿಯಾರಿಗೆ ಕೋವಿಡ್‌ನಿಂದಾಗಿ ವೈದ್ಯರು ಮನೆಯಲ್ಲಿ ಕಡ್ಡಾಯ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದರು. ಶ್ವಾಸಕೋಶ ಸೋಂಕಿಗೆ ತುತ್ತಾಗಿದ್ದ ಸೋನಿಯಾ ಗಾಂಧಿ ಅವರು ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಹೊಸ ಸಂಸತ್ ಭವನದಲ್ಲಿ 9,500 ಕೆಜಿ ಕಂಚಿನ ರಾಷ್ಟ್ರೀಯ ಲಾಂಛನ ಅನಾವರಣ – ಏನಿದರ ವಿಶೇಷ?
Advertisement
Advertisement
ಇದೇ ಕಾರಣದಿಂದಾಗಿ ಜೂನ್ 23 ರಂದು ಸೋನಿಯಾ ಗಾಂಧಿ ಅವರು ಇಡಿ ಎದುರು ವಿಚಾರಣೆಗೆ ಹಾಜರಾಗಲು ಸಾಧ್ಯ ಆಗಿರಲಿಲ್ಲ. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಸೀರೆಯಲ್ಲಿ ಮಿಂಚಿದ ಉರ್ಫಿ ಜಾವೇದ್: ಹೀಗೂ ಸೀರೆ ಉಡಬಹುದಾ ಎಂದ ಫ್ಯಾನ್ಸ್
ಏನಿದು ಪ್ರಕರಣ?
ಜವಹರಲಾಲ್ ನೆಹರೂ ಅವರು ಆರಂಭಿಸಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಅಸೋಸಿಯೇಟ್ ಜರ್ನಲ್ಸ್ ಲಿಮಿಟೆಡ್ ಎಂಬ ಸಂಸ್ಥೆ ಪ್ರಕಟಿಸುತ್ತಿತ್ತು. ಈ ಸಾರ್ವಜನಿಕ ಸಂಸ್ಥೆಯನ್ನು ರಾಹುಲ್ ಗಾಂಧಿ ನಿರ್ದೇಶಕರಾಗಿರುವ ಯಂಗ್ ಇಂಡಿಯಾ ಲಿಮಿಟೆಡ್ ಖಾಸಗಿ ಸಂಸ್ಥೆಯು ಖರೀದಿ ಮಾಡಿತ್ತು. ಈ ವೇಳೆ ಅಕ್ರಮವಾಗಿ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ಕೇಳಿ ಬಂದಿದೆ.