ಮುಂಬೈ: ಮಹಾರಾಷ್ಟ್ರ ಸಚಿವ ಹಾಗೂ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರ ಇಬ್ಬರು ಪುತ್ರರು ಹಾಗೂ ಪತ್ನಿಗೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ನೀಡಿತ್ತು. ಆದರೆ ಅವರಲ್ಲಿ ಯಾರೊಬ್ಬರೂ ವಿಚಾರಣೆಗೆ ಹಾಜರಾಗಿಲ್ಲ ಎಂದು ಇಡಿ ತಿಳಿಸಿದೆ.
ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವಾಬ್ ಮಲಿಕ್ ಅವರ ಪತ್ನಿ ಮೆಹಜಬಿನ್ ಅವರಿಗೆ ಎರಡು ಬಾರಿ ಸಮನ್ಸ್ ನೀಡಲಾಗಿದ್ದು, ಅವರ ಪುತ್ರ ಫರಾಜ್ ಮಲಿಕ್‌ಗೆ 5 ಬಾರಿ ಸಮನ್ಸ್ ನೀಡಲಾಗಿದೆ. ಆದರೆ ಅವರಲ್ಲಿ ಯಾರೊಬ್ಬರೂ ಇಡಿ ಮುಂದೆ ಹಾಜರಾಗಿಲ್ಲ ಎಂದು ಬುಧವಾರ ಬೆಳಗ್ಗೆ ಆರೋಪ ಪಟ್ಟಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ಮೇ ಅಂತ್ಯಕ್ಕೆ ರಾಜ್ಯದ ಜನತೆಗೆ ಗುಡ್ ನ್ಯೂಸ್?
Advertisement
Advertisement
ಇಡಿ ತನಿಖೆ ಪ್ರಕಾರ ನವಾಬ್ ಮಲಿಕ್, ದರೋಡೆಕೋರ ದಾವೂದ್ ಇಬ್ರಾಹಿಂನ ಡಿ-ಕಂಪನಿಯೊಂದಿಗೆ ದೀರ್ಘಕಾಲದಿಂದ ಸಂಪರ್ಕ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇಡಿ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. ಇದನ್ನೂ ಓದಿ: ಪರಿಷತ್ ಅಭ್ಯರ್ಥಿಗಳ ಆಸ್ತಿ ವಿವರ – ಬಹುತೇಕರು ಕೋಟಿ ಒಡೆಯರು!
Advertisement
ನವಾಬ್ ಮಲಿಕ್ ಕುರ್ಲಾದಲ್ಲಿರುವ ಗೋವಾಲಾ ಕಟ್ಟಡವನ್ನು ಆಕ್ರಮಿಸಿಕೊಳ್ಳುವಲ್ಲಿ ಹಣ ವರ್ಗಾವಣೆ ಹಾಗೂ ಪಿತೂರಿಗಳಲ್ಲಿ ಭಾಗಿಯಾಗಿದ್ದಾರೆ ಎಂದು ಇಡಿ ಚಾರ್ಜ್ಶೀಟ್‌ನಲ್ಲಿ ತಿಳಿಸಿದೆ.