ನನ್ನ ಬಂಧನಕ್ಕೆ ಇಡಿ ಬಂದಿದೆ – ದೆಹಲಿ ಆಪ್ ಶಾಸಕ ಕಿಡಿ

Public TV
1 Min Read
AAP Amanatullah Khan Enforcement Directorate

ನವದೆಹಲಿ: ವಕ್ಫ್ ಬೋರ್ಡ್‍ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳ ತಂಡ ಆಮ್ ಆದ್ಮಿ ಪಕ್ಷದ (AAP) ಶಾಸಕ ಅಮಾನತುಲ್ಲಾ ಖಾನ್ (Amanatullah Khan) ಅವರ ಮನೆಯ ಮೇಲೆ ದಾಳಿ ನಡೆಸಿದೆ.

ದೆಹಲಿ ವಕ್ಫ್ ಮಂಡಳಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವರು ಅಕ್ರಮ ನೇಮಕಾತಿ ಮತ್ತು ಹಣಕಾಸಿನ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.

ಇಡಿ ದಾಳಿಯ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನನ್ನು ಬಂಧಿಸಲು ಇಡಿ ಅಧಿಕಾರಿಗಳು ನನ್ನ ಮನೆಗೆ ಬಂದಿದ್ದಾರೆ. ಸರ್ವಾಧಿಕಾರಿಯ ಆದೇಶದ ಮೇರೆಗೆ ಆತನ ಕೈಗೊಂಬೆ ಇಡಿ ನನ್ನ ಮನೆಗೆ ಬಂದಿದೆ. ನನಗೆ ಮತ್ತು ಆಪ್ ನಾಯಕರಿಗೆ ಕಿರುಕುಳ ನೀಡಲು ಸರ್ವಾಧಿಕಾರಿ ಯಾವುದೇ ಅವಕಾಶವನ್ನೂ ಬಿಡುತ್ತಿಲ್ಲ. ಪ್ರಾಮಾಣಿಕವಾಗಿ ಜನರ ಸೇವೆ ಮಾಡುವುದು ಅಪರಾಧವೇ? ಈ ಸರ್ವಾಧಿಕಾರ ಎಷ್ಟು ದಿನ ಉಳಿಯುತ್ತದೆ? ಎಂದು ಅಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಸಿಎಂ ಬಳಿಕ ಹಲವು ಕೈ ನಾಯಕರಿಗೆ ಪ್ರಾಸಿಕ್ಯೂಷನ್‌ ಭೀತಿ

ಎಎಪಿ ಸಂಸದ ಸಂಜಯ್ ಸಿಂಗ್ ಅವರು ಎಕ್ಸ್‌ನಲ್ಲಿ ಜೆಪಿಯ ರಾಜಕೀಯ ದ್ವೇಷದ ಕಾರಣದಿಂದಾಗಿ ಖಾನ್ ಅವರನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಖಾನ್ ಮನೆಯ ಬಳಿ ದೆಹಲಿ ಪೊಲೀಸರು ಮತ್ತು ಅರೆಸೇನಾ ಪಡೆಗಳ ತುಕುಡಿಯನ್ನು ನಿಯೋಜಿಸಲಾಗಿದೆ. ಅಧಿಕಾರಿಗಳು ದಾಖಲೆಗಳು ಸೇರಿದಂತೆ ಮನೆಯ ಎಲ್ಲೆಡೆ ಶೋಧ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಪರಾಧಿಗಳು ನಿರ್ಭೀತಿಯಿಂದ ಓಡಾಟ, ಸಂತ್ರಸ್ತರ ಪರದಾಟ: ದ್ರೌಪದಿ ಮುರ್ಮು ಕಳವಳ

Share This Article