ಬೆಳಗಾವಿ: ಶಿವಂ ಅಸೋಸಿಯೇಟ್ಸ್ (Shivam Associates) ವಿರುದ್ಧದ ವಂಚನೆ ಪ್ರಕರಣಕ್ಕೆ ಇದೀಗ ಜಾರಿ (ED Raid) ನಿರ್ದೇಶನಾಲಯ (ED) ಎಂಟ್ರಿಯಾಗಿದೆ. ದಾಳಿ ಬಳಿಕ ಇಡಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಕಂಪನಿ ಮೂಲಕ ನಡೆದಿದೆ ಎನ್ನಲಾದ ಹಣಕಾಸು ವಂಚನೆಯ ಹಲವು ವಿವರಗಳು ಬಹಿರಂಗವಾಗಿವೆ.
ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ವಿರುದ್ಧ ಜಿಲ್ಲಾಡಳಿತ ಸಾರಿದ್ದ ಸಮರದ ಬಳಿಕ ಇದೀಗ ಪ್ರಕರಣವನ್ನು ಜಾರಿ ನಿರ್ದೇಶನಾಲಯ (ED) ಕೈಗೆತ್ತಿಕೊಂಡಿತ್ತು. ದಾಳಿ ನಡೆಸಿದ ಬಳಿಕ ಇಡಿ ತನ್ನ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಶಿವಾನಂದ ನೀಲಣ್ಣವರ್ ಒಡೆತನದ ‘ಶಿವಂ ಅಸೋಸಿಯೇಟ್ಸ್’ ಕಂಪನಿಯ ಮೂಲಕ ನಡೆದಿದೆ ಎನ್ನಲಾದ ವಂಚನೆಯ ವಿವರಗಳನ್ನು ಬಿಚ್ಚಿಟ್ಟಿದೆ.
ಶಿವಂ ಅಸೋಸಿಯೇಟ್ಸ್ ಹಾಗೂ ಅದರ ಅಂಗ ಸಂಸ್ಥೆಗಳಿಂದ ಸುಮಾರು 2,110 ಕೋಟಿ ರೂ. ವಂಚನೆಯಾಗಿದೆ ಎಂದು ಇಡಿ ಮಾಹಿತಿ ನೀಡಿದೆ. ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ನಂತರ ಇಡಿ ಅಧಿಕಾರಿಗಳು ಶಿವಾನಂದ ನೀಲಣ್ಣವರ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದರು.
ಇಡಿ ದಾಳಿಯಲ್ಲಿ 2,110 ಕೋಟಿ ರೂ. ವಂಚನೆಯಾಗಿರುವುದು ಬೆಳಕಿಗೆ ಬಂದಿದ್ದು, ಈ ಪೈಕಿ ಹೂಡಿಕೆದಾರರಿಗೆ ಕೇವಲ 333.89 ಕೋಟಿ ರೂ. ಮಾತ್ರ ವಾಪಸ್ ಆಗಿರುವುದು ಕಂಡುಬಂದಿದೆ. ಇದನ್ನೂ ಓದಿ: ಪುರಿ ಜಗನ್ನಾಥ್ ನಿರ್ದೇಶನದ ಚಿತ್ರದಲ್ಲಿ ನಟಿ ಟಬು ಪವರ್ ಫುಲ್ ಪಾತ್ರ
ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ಶೇರು ಮಾರುಕಟ್ಟೆ, ಬ್ಯಾಂಕ್‌ಗಳ ನಿಶ್ಚಿತ ಠೇವಣಿ ಹಾಗೂ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಲಾಗಿತ್ತು. ಈ ಹಣಕಾಸಿನ ಜಾಲದಲ್ಲಿ ಶಿವಂ ಅಸೋಸಿಯೇಟ್ಸ್, ಸುಭಾಷ್ ರಾಮನಗೌಡ ನಂದರಗಿ, ಮಹೇಶ್ ಎಸ್. ನೀಲಣ್ಣವರ್, ಶಿವಂ ಪ್ರೊಡಕ್ಷನ್ಸ್, ಶಿವಂ ಲೈಫ್ಲೈನ್ ಪ್ರೈವೇಟ್ ಲಿಮಿಟೆಡ್, ಶಿವಂ ಸೇವಾ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಕೆಲ ವ್ಯಕ್ತಿಗಳು ವ್ಯವಹಾರದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ ಎಂದು ಇಡಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಅಕ್ರಮ ಹಣಕಾಸು ವಹಿವಾಟು ಹಾಗೂ ಬೇನಾಮಿ ಆಸ್ತಿ ಹೂಡಿಕೆಗೆ ಸಂಬಂಧಿಸಿದಂತೆ ಡಿಜಿಟಲ್ ಸಾಕ್ಷಿಗಳು ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಇದನ್ನೂ ಓದಿ: ಜೈಲಲ್ಲಿ ಮೊಬೈಲ್ ಪತ್ತೆ | ಪ್ರಜ್ವಲ್ ರೇವಣ್ಣ ವಿರುದ್ಧ FIR – ಸಿಸಿಬಿ ಇನ್ಸ್‌ಪೆಕ್ಟರ್ ನೀಡಿದ ದೂರಿನಲ್ಲೇನಿದೆ?

