ಕೋಚಿಮುಲ್ ನೇಮಕಾತಿ ಅಕ್ರಮದಲ್ಲಿ ಮಂಗಳೂರು ವಿವಿ ಭಾಗಿಯಾಗಿರುವ ಶಂಕೆ – ಇಡಿ ವಿಚಾರಣೆ

Public TV
1 Min Read
Kochimul

– ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವದಲ್ಲೇ ಪ್ರಶ್ನೆಪತ್ರಿಕೆ ಮಾರಾಟವಾಗಿರುವ ಅನುಮಾನ
– ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ರಾಜುಕೃಷ್ಣ ಚಲನ್ನವರ್ ವಿಚಾರಣೆ

ಮಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೇಮಕಾತಿ ಪರೀಕ್ಷೆ ಹಗರಣದಲ್ಲಿ ಮಂಗಳೂರು ವಿವಿ (Mangaluru University) ನೇರವಾಗಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

Mangaluru University

ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ (Kochimul) ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮಾರಾಟವಾಗಿದೆ ಅನ್ನೋ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ಜ.20) ಮಂಗಳೂರು ವಿವಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ತಂಡ ಭೇಟಿ ನೀಡಿ ತೀವ್ರ ವಿಚಾರಣೆ ನಡೆಸಿದೆ. ಇದನ್ನೂ ಓದಿ: ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಕಠಿಣ ವ್ರತ – ಪ್ರತಿದಿನ 1 ಗಂಟೆ ವಿಶೇಷ ಮಂತ್ರ ಪಠಣ

ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ತಾಲೂಕಿನ ಕೊಣಾಜೆಯಲ್ಲಿರುವ ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಪರೀಕ್ಷಾಂಗ ಕುಲಸಚಿವ ಪ್ರೊ.ರಾಜುಕೃಷ್ಣ ಚಲನ್ನವರ್ ಅವರನ್ನ ವಿಚಾರಣೆ ನಡೆಸಿದೆ. ಇದನ್ನೂ ಓದಿ: ರಾಮಮಂದಿರದ ಮಂಡಲೋತ್ಸವ ಪೂಜೆಗೆ ರಾಯಚೂರಿನ ವೈದಿಕರಿಬ್ಬರು ಆಯ್ಕೆ

ಕೋಚಿಮುಲ್ ನೇಮಕಾತಿ ಹಗರಣ ಸಂಬಂಧ ಈ ಹಿಂದೆಯೇ ವಿವಿ ಪರೀಕ್ಷಾಂಗ ಕುಲಸಚಿವರಿಗೆ ನೋಟಿಸ್ ನೀಡಲಾಗಿತ್ತು. ಶನಿವಾರ ವಿವಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ, ವಿವಿ ಅಧಿಕಾರಿಗಳೇ ಅಭ್ಯರ್ಥಿಗಳಿಗೆ ಲಕ್ಷಾಂತರ ರೂ.ಗಳಿಗೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಅಲ್ಲದೇ ವಿವಿ ಅಧಿಕಾರಿಗಳ ಇ-ಮೇಲ್, ದೂರವಾಣಿ ಕರೆಗಳ ವಿವರ ಹಾಗೂ ಬ್ಯಾಂಕಿಂಗ್ ವ್ಯವಹಾರಗಳ ಕುರಿತು ತೀವ್ರ ತಪಾಸಣೆ ನಡೆಸಿದೆ. ಇದನ್ನೂ ಓದಿ: ತಲೆಗೂದಲಿಗೆ ಹಗ್ಗ ಕಟ್ಟಿಕೊಂಡೇ ರಾಮರಥ ಎಳೆದ ಸ್ವಾಮೀಜಿ; ಅಯೋಧ್ಯೆ ಕಡೆಗೆ 566 ಕಿಮೀ ಯಾತ್ರೆ

Share This Article