– ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವದಲ್ಲೇ ಪ್ರಶ್ನೆಪತ್ರಿಕೆ ಮಾರಾಟವಾಗಿರುವ ಅನುಮಾನ
– ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ರಾಜುಕೃಷ್ಣ ಚಲನ್ನವರ್ ವಿಚಾರಣೆ
ಮಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೇಮಕಾತಿ ಪರೀಕ್ಷೆ ಹಗರಣದಲ್ಲಿ ಮಂಗಳೂರು ವಿವಿ (Mangaluru University) ನೇರವಾಗಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ (Kochimul) ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮಾರಾಟವಾಗಿದೆ ಅನ್ನೋ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ಜ.20) ಮಂಗಳೂರು ವಿವಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ತಂಡ ಭೇಟಿ ನೀಡಿ ತೀವ್ರ ವಿಚಾರಣೆ ನಡೆಸಿದೆ. ಇದನ್ನೂ ಓದಿ: ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಕಠಿಣ ವ್ರತ – ಪ್ರತಿದಿನ 1 ಗಂಟೆ ವಿಶೇಷ ಮಂತ್ರ ಪಠಣ
ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ತಾಲೂಕಿನ ಕೊಣಾಜೆಯಲ್ಲಿರುವ ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಪರೀಕ್ಷಾಂಗ ಕುಲಸಚಿವ ಪ್ರೊ.ರಾಜುಕೃಷ್ಣ ಚಲನ್ನವರ್ ಅವರನ್ನ ವಿಚಾರಣೆ ನಡೆಸಿದೆ. ಇದನ್ನೂ ಓದಿ: ರಾಮಮಂದಿರದ ಮಂಡಲೋತ್ಸವ ಪೂಜೆಗೆ ರಾಯಚೂರಿನ ವೈದಿಕರಿಬ್ಬರು ಆಯ್ಕೆ
ಕೋಚಿಮುಲ್ ನೇಮಕಾತಿ ಹಗರಣ ಸಂಬಂಧ ಈ ಹಿಂದೆಯೇ ವಿವಿ ಪರೀಕ್ಷಾಂಗ ಕುಲಸಚಿವರಿಗೆ ನೋಟಿಸ್ ನೀಡಲಾಗಿತ್ತು. ಶನಿವಾರ ವಿವಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ, ವಿವಿ ಅಧಿಕಾರಿಗಳೇ ಅಭ್ಯರ್ಥಿಗಳಿಗೆ ಲಕ್ಷಾಂತರ ರೂ.ಗಳಿಗೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಅಲ್ಲದೇ ವಿವಿ ಅಧಿಕಾರಿಗಳ ಇ-ಮೇಲ್, ದೂರವಾಣಿ ಕರೆಗಳ ವಿವರ ಹಾಗೂ ಬ್ಯಾಂಕಿಂಗ್ ವ್ಯವಹಾರಗಳ ಕುರಿತು ತೀವ್ರ ತಪಾಸಣೆ ನಡೆಸಿದೆ. ಇದನ್ನೂ ಓದಿ: ತಲೆಗೂದಲಿಗೆ ಹಗ್ಗ ಕಟ್ಟಿಕೊಂಡೇ ರಾಮರಥ ಎಳೆದ ಸ್ವಾಮೀಜಿ; ಅಯೋಧ್ಯೆ ಕಡೆಗೆ 566 ಕಿಮೀ ಯಾತ್ರೆ