ಕೊಪ್ಪಳ: ಮಹಿಳೆಯರು ಸ್ವಾವಲಂಬಿಗಳಾಗಿ ಜೀವಿಸಲು ಮುಂದಾಗಿ ಎಂದು ಪದ್ಮಶ್ರೀ ಪುರಸ್ಕøತೆ ಮಂಜಮ್ಮ ಜೋಗತಿ ಹೇಳಿದರು.
ಗಂಗಾವತಿ ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಆರ್ಯ ವೈಶ್ಯ ಸಮಾಜದ ವಾಸವಿ ಮಹಿಳಾ ಮಂಡಳಿಯ ವತಿಯಿಂದ ಇಂದು ಹಮ್ಮಿಕೊಂಡ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಸ್ತುತ ದಿನಮಾನಗಳಲ್ಲಿ ಹೆಣ್ಣು ಮಕ್ಕಳಿಗೆ ಹೆಣ್ಣಿನಿಂದಲೇ ಶೋಷಣೆಗಳು ನಡೆಯುತ್ತಿರುವ ಪ್ರಸಂಗಗಳು ಕಂಡು ಬರುತ್ತಿವೆ. ಹೆಣ್ಣು ಒಂದಾಗಬೇಕು, ನಾವೆಲ್ಲರೂ ಒಂದು ಎನ್ನುವ ಮನೋಭಾವನೆಯನ್ನು ಬೆಳೆಸಿಕೊಂಡು ಪ್ರತಿಯೊಬ್ಬರು ಸ್ವಾವಲಂಬಿಗಳಾಗಿ ಬದುಕು ಸಾಗಿಸಬೇಕು ಎಂದರು. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದ ಜನ ಅಧಿಕಾರಕ್ಕೆ ಬಂದಂತೆ: ಡಿಕೆಶಿ
Advertisement
Advertisement
21ನೇ ಶತಮಾನದಲ್ಲಿನ ನಗರ ಪ್ರದೇಶಗಳಲ್ಲಿನ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ತಮ್ಮ ಸಾಮಥ್ರ್ಯವನ್ನು ಸಾಬಿತು ಪಡಿಸುತ್ತಿದ್ದಾರೆ. ಆದರೆ ಗ್ರಾಮೀಣ ಭಾಗಗಳಲ್ಲಿ ಇರುವ ಮಹಿಳೆಯರು ಇನ್ನೂ ನಾಲ್ಕು ಗೋಡೆಗಳ ನಡುವೆ ಜೀವನವನ್ನು ಸಾಗಿಸುತ್ತಿದ್ದಾರೆ. ಮಹಿಳೆಯರ ಮೇಲಿನ ಶೋಷಣೆಗಳು ನಿಲ್ಲಬೇಕು. ಮಹಿಳೆಯರು ಬದಲಾವಣೆ ಆಗಬೇಕು ಎಂದಾದರೆ, ಮೊದಲು ಗ್ರಾಮೀಣ ಭಾಗಗಳಲ್ಲಿ ಇರುವ ಮಹಿಳೆಯರು ಸ್ವಾತಂತ್ರ್ಯವನ್ನು ಪಡೆದುಕೊಳ್ಳಬೇಕು ಎಂದು ತಿಳಿ ಹೇಳಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ಒನ್ ನೇಷನ್, ಒನ್ ಎಲೆಕ್ಷನ್ ಪ್ರಸ್ತಾಪಿಸಿದ ಸ್ಪೀಕರ್ ಕಾಗೇರಿ
Advertisement
ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯು ಶಿಕ್ಷಣವನ್ನು ಪಡೆದುಕೊಳ್ಳಬೇಕು. ಗ್ರಾಮೀಣದಿಂದ ನಗರದವರೆಗೆ ಅವರನ್ನು ಗುರುತಿಸಿ, ಅವರ ಪ್ರತಿಭೆಗಳಿಗೆ ಪ್ರೋತ್ಸಾಹಿಸಬೇಕು. ಅಂದಾಗ ಮಾತ್ರ ಮಹಿಳಾ ಸಮಾಜ ಬದಲಾವಣೆಯನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಹೇಳಿದರು. ನಂತರ ಕಾರ್ಯಕ್ರಮದಲ್ಲಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.