– ಬೆಂಗಳೂರು ಉತ್ತರ, ದಕ್ಷಿಣ, ಗ್ರಾಮಾಂತರಕ್ಕೆ ಮಾತ್ರ ಅನ್ವಯ
– ಶಿಕ್ಷಣ ಇಲಾಖೆಯಿಂದ ಆದೇಶ
ಬೆಂಗಳೂರು: ಮಹಾಮಾರಿ ಕೊರೊನಾ ಸಿಲಿಕಾನ್ ಸಿಟಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಬಿಬಿಎಂಪಿ, ಬೆಂಗಳೂರು ಗ್ರಾಮಾಂತರ ಭಾಗದ ಶಾಲೆಗಳಲ್ಲಿ 1ರಿಂದ 6ನೇ ತರಗತಿವರೆಗೆ ಪರೀಕ್ಷೆಯನ್ನು ರದ್ದುಗೊಳಿಸಿದೆ.
Advertisement
ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಯಲ್ಲಿ, 1ರಿಂದ 6ನೇ ತರಗತಿವರೆಗೆ ಪರೀಕ್ಷೆ ಇಲ್ಲ. 7ರಿಂದ 9ನೇ ತರಗತಿವರೆಗೆ ಮಾರ್ಚ್ 23 ಒಳಗೆ ಪರೀಕ್ಷೆ ನಡೆಸಬೇಕು. ಆ ಬಳಿಕ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ರಜೆ ನೀಡಬೇಕು. ಹಾಗೆಯೇ 10ನೇ ತರಗತಿ ವಿದ್ಯಾರ್ಥಿಗಳಿಗೆ ಈಗಾಗಲೇ ನಿಗದಿಗೊಳಿಸಿರುವ ದಿನಾಂಕದಂದೆ ಪರೀಕ್ಷೆ ನಡೆಸಲಾಗುವುದು. ಅಲ್ಲದೇ ವಿದ್ಯಾರ್ಥಿಗಳು ನಿಗದಿತ ಪರೀಕ್ಷೆಯ ದಿನ ಮಾತ್ರ ಶಾಲೆಗೆ ಬಂದು ಪರೀಕ್ಷೆ ಬರೆಯಬೇಕು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ.
Advertisement
Advertisement
ಸುತ್ತೋಲೆಯಲ್ಲಿ ಏನಿದೆ?
ಬಿಬಿಎಂಪಿ, ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಗ್ರಾಮಾಂತರ ಭಾಗದ ಶಾಲೆಗಳಿಗೆ ಮಾತ್ರ ಈ ಆದೇಶ ಅನ್ವಯವಾಗಲಿದೆ. ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ನೀಡಲಾಗುವುದು. 2020-21ನೇ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿಯಂತೆ ಶಾಲೆ ಪುನರಾರಂಭವಾಗಲಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
Advertisement
1ರಿಂದ 6ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದು ಮಾಡಿರುವ ಹಿನ್ನೆಲೆ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಎಫ್‍ಎ 1, ಎಫ್‍ಎ 2, ಎಫ್‍ಎ 3, ಎಫ್‍ಎ 4 ಹಾಗೂ ಎಸ್‍ಎ 1ರಲ್ಲಿ ಗಳಿಸಿದ ಅಂಕಗಳ ಆಧಾರದ ಮೇರೆಗೆ ವಿದ್ಯಾರ್ಥಿಗಳ ಶ್ರೇಣಿಕೃತ ಫಲಿತಾಂಶವನ್ನು ಪ್ರಕಟಿಸಿ, ಮುಂದಿನ ತರಗತಿಗಳಿಗೆ ಭಡ್ತಿ ನೀಡಬೇಕು. ಈ ಸಾಲಿನ ಬೇಸಿಗೆ ರಜೆಯನ್ನು ಇಂದಿನಿಂದಲೇ ಘೋಷಿಸಲಾಗುವುದು.
ಇತ್ತ 7ರಿಂದ 8ನೇ ತರಗತಿಗಳನ್ನು ಮಾರ್ಚ್ 13ರಿಂದ ಪರೀಕ್ಷಾ ಪೂರ್ವಸಿದ್ಧಾತಾ ರಜೆಯ ಮಾದರಿಯಲ್ಲಿ ಸ್ಥಗಿತಗೊಳಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನಗಳಂದು ಮಾತ್ರ ಶಾಲೆಗೆ ಹಾಜರಾಗುವಂತೆ ಸೂಚಿಸಬೇಕು. ಮಾರ್ಚ್ 23 ಒಳಗೆ ಪರೀಕ್ಷೆಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಬೇಸಿಗೆ ರಜೆಯನ್ನು ನೀಡಬೇಕು. ಹಾಗೆಯೇ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ನಿಗದಿಪಡಿಸಿರುವ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಲಾಗುತ್ತದೆ.
ಅಷ್ಟೇ ಅಲ್ಲದೇ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಇಚ್ಛಿಸಿದರೆ ಅವರಿಗೆ ಅನುಮತಿ ನೀಡಬೇಕು. ಹಾಗೆಯೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಶಾಲೆಯ ಮುಖ್ಯಸ್ಥರುಗಳಿಗೆ ಸೂಚಿಸಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಈಗಾಗಲೇ ಶಿಕ್ಷಣ ಇಲಾಖೆ ಮುಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದ ಪೂರ್ವ ಪ್ರಾರ್ಥಮಿಕ, ಎಲ್‍ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಮಾರ್ಚ್ 9ರಿಂದಲೇ ರಜೆ ಘೋಷಿಸಿದೆ. ಹಾಗೆಯೇ ಸರ್ಕಾರಿ, ಅನುಧಾನಿತ ಹಾಗೂ ಅನುಧಾನರಹಿತ ಶಾಲೆಗಳ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾರ್ಚ್ 10ರಿಂದ ಮುಂದಿನ ಆದೇಶದವರೆಗೆ ರಜೆ ಘೋಷಿಸಿದೆ.