ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟ ಸೋಮವಾರ (ಸೆ.11) ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿವೆ. ಆದರೆ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಪರಿಸ್ಥಿತಿಗೆ ಅನುಗುಣವಾಗಿ ರಜೆ ಘೋಷಣೆ ಮಾಡುವ ಅಧಿಕಾರವನ್ನು ಡಿಸಿಗಳಿಗೆ ಸರ್ಕಾರ ನೀಡಿದೆ. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಡಿಸಿಗಳಿಗೆ ಸೂಚನೆ ನೀಡಿದೆ. ಇದನ್ನೂ ಓದಿ: ನಾಳೆ ಬೆಂಗಳೂರು ಬಂದ್; 500 ಹೆಚ್ಚುವರಿ ಬಸ್ ರಸ್ತೆಗಿಳಿಸಲು ಬಿಎಂಟಿಸಿ ನಿರ್ಧಾರ
ನಾಳೆ ಸಾರಿಗೆ ಒಕ್ಕೂಟಗಳು ಕರೆ ನೀಡಿರುವ ಬೆಂಗಳೂರು ಬಂದ್‌ಗೆ ಖಾಸಗಿ ಶಾಲೆಗಳು ನೈತಿಕ ಬೆಂಬಲ ವ್ಯಕ್ತಪಡಿಸಿವೆ. ಬಂದ್‌ಗೆ ಬೆಂಬಲ ಸೂಚಿಸಿ ಕೆಲವು ಶಾಲೆಗಳು ರಜೆ ಘೋಷಣೆ ಮಾಡಿವೆ. ಈಗಾಗಲೇ ಹೆಬ್ಬಾಳದ ವಿದ್ಯಾನಿಕೇತನ ಶಾಲೆ, ಆರ್ಕಿಡ್ ಆಡಳಿತ ಮಂಡಳಿಯವರು ರಜೆ ಘೋಷಿಸಿದ್ದಾರೆ.
ಆದರೆ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಇಲ್ಲ. ಕ್ಯಾಮ್ಸ್, ಕುಸ್ಮಾ ಸೇರಿ ಹಲವು ಸಂಘಟನೆಗಳಿಂದ ರಜೆ ಘೋಷಣೆ ಮಾಡಿಲ್ಲ. ರಜೆ ಕೊಡುವ ಬಗ್ಗೆ ಆಯಾ ಶಾಲಾ ಆಡಳಿತ ಮಂಡಳಿಗಳು ನಿರ್ಧಾರ ಮಾಡಬಹುದು. ಆದರೆ ಯಾವುದೇ ಸಂಘಟನೆಯಿಂದ ಅಧಿಕೃತ ರಜೆ ಕೊಡೋದಿಲ್ಲ ಎಂದು ಕ್ಯಾಮ್ಸ್, ಕುಸ್ಮಾ ಸಂಘಟನೆಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ಹುಡ್ಗಿ ಚೆನ್ನಾಗಿದ್ದರೆ ಎಲ್ಲರೂ ಇಷ್ಟಪಡ್ತಾರೆ, ಹಾಗೇ ಬಿಜೆಪಿ ಕೂಡ ಬರ್ತಾ ಇದೆ: ಸಿ.ಎಂ ಇಬ್ರಾಹಿಂ
Web Stories