ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
1-10 ನೇ ತರಗತಿ ವರೆಗೂ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಸರ್ಕಾರ ಘೋಷಣೆ ಮಾಡಿದೆ. ಆದರೆ, ಕೆಲವು ಶಾಲೆಗಳಲ್ಲಿ SDMC ಸೂಚನೆ ಮೇರೆಗೆ 3 ದಿನ ಮೊಟ್ಟೆ, 3 ದಿನ ಬಾಳೆಹಣ್ಣು ಕೊಡುವ ಕೆಲಸ ಆಗ್ತಿದೆ. ಸೋಮವಾರ ಮತ್ತು ಶನಿವಾರ ಮೊಟ್ಟೆ ಕೊಡದ ಬಾಳೆಹಣ್ಣು ಕೊಡ್ತಿದ್ದಾರೆ. ಇದನ್ನೂ ಓದಿ: ಶಿರಸಿ ನಗರಸಭೆಯಲ್ಲಿ 21 ಲಕ್ಷ ಮೌಲ್ಯದ ಐರನ್ ಪೈಪ್ ಕಳ್ಳತನ ಕೇಸ್ – ನಗರಸಭೆ ಕಮಿಷನರ್, ಮಾಜಿ ಅಧ್ಯಕ್ಷ ಸೇರಿ 7 ಆರೋಪಿಗಳು
762 ಶಾಲೆಗಳಲ್ಲಿ ಪರಿಶೀಲನೆ ಮಾಡಿದಾಗ ಸುಮಾರು 568 ಶಾಲೆಗಳಲ್ಲಿ ಮೊಟ್ಟೆ ಕಡ್ಡಾಯವಾಗಿ ಕೊಡುತ್ತಿಲ್ಲದ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ 568 ಶಾಲೆಗಳಿಗೆ ಭೇಟಿ ನೀಡಿ SDMC ಅವರಿಗೆ ತಿಳುವಳಿಕೆ ಹೇಳಬೇಕು ಎಂದು DDPIಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಪಿಎಂ ಪೋಷಣ್ ಶಕ್ತಿ ನಿರ್ಮಾಣದ ನಿರ್ದೇಶಕರು ಈ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ನಮಗೆ ಕುಡಿಯೋಕೆ ನೀರು ಕೊಡಿ: ಸಿಎಂಗೆ ವಿದ್ಯಾರ್ಥಿನಿ ಪತ್ರ