ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ `ಒಂದು ಭಾರತ ಶ್ರೇಷ್ಟ ಭಾರತ’ ಕಾರ್ಯಕ್ರಮದ ಅಡಿಯಲ್ಲಿ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಕರೆದೊಯ್ಯುವ ಯೋಜನೆ ರೂಪಿಸಲಾಗಿದೆ.
ಆದ್ರೆ ಶಿಕ್ಷಣ ಇಲಾಖೆ ಹಿಂದಿ ಬರುವ ವಿದ್ಯಾರ್ಥಿಗಳಿಗೆ ಮಾತ್ರ ಆದ್ಯತೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದು ಮತ್ತೆ ವಿವಾದಕ್ಕೆ ಕಾರಣವಾಗಿದೆ, ಕನ್ನಡ ಪರ ಸಂಘಟನೆಗಳೂ ಇದಕ್ಕೆ ಆಕ್ರೋಶ ವ್ಯಕ್ತಪಡಿಸಿವೆ. ಕೇಂದ್ರ ಸರ್ಕಾರ ಈ ಸೂಚನೆ ವಿಧಿಸದೇ ಇದ್ರೂ ಶಿಕ್ಷಣ ಇಲಾಖೆ ಈ ನಿರ್ಧಾರಕ್ಕೆ ಮುಂದಾಗಿರುವುದು ಇದೀಗ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್
Advertisement
Advertisement
Advertisement
ಈ ಸಂಬಂಧ ಶಿಕ್ಷಣ ಇಲಾಖೆಗೆ ಪತ್ರ ಬರೆದಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ, ಶಿಕ್ಷಣ ಇಲಾಖೆಯ ಹಿಂದಿ ಹೇರಿಕೆ ನೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 4 ದಿನ, 80 ಅಡಿ ಕೊಳವೆ ಬಾವಿಯಲ್ಲೇ ಸಿಲುಕಿದ್ದ ಹುಡುಗ – 104 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ
Advertisement
ಹಿಂದಿ ಭಾಷೆ ಬಂದವರಿಗಷ್ಟೇ ಅವಕಾಶ ಕೊಟ್ಟರೆ, ಕನ್ನಡ ವಿದ್ಯಾರ್ಥಿಗಳಿಗೆ ವಂಚಿಸಿದಂತಾಗುತ್ತದೆ. ಕರ್ನಾಟಕದಲ್ಲಿ ಕನ್ನಡ ಭಾಷೆ ಸಾರ್ವಭೌಮ ಭಾಷೆ. ಹಿಂದಿ ಭಾಷೆ ತಿಳಿಯದ ಕನ್ನಡದ ವಿದ್ಯಾರ್ಥಿಗಳಿಗೂ ಪ್ರವಾಸದ ಅವಕಾಶ ಕೊಡಬೇಕು. ಭಾಷೆಯಿಂದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಭೇದ ಭಾವ ಬಿತ್ತುವ ಶಿಕ್ಷಣ ಇಲಾಖೆ ಕ್ರಮ ಸರಿಯಲ್ಲ. ಕೂಡಲೇ ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಇದು ಸರ್ಕಾರದ ಆದೇಶವಲ್ಲ. ರಾಜ್ಯ ಸರ್ಕಾರ ಇಂತಹ ಯಾವುದೇ ಆದೇಶ ಹೊರಡಿಸಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದನ್ನ ಯಾರಿಗೂ ಸೂಚನೆ ನೀಡಿಲ್ಲ. ಇದು ಡಿಡಿಪಿಯು ಮಾಡಿರೋ ಲೋಪ. ಸರ್ಕಾರ ಯಾವುದೇ ಇಂತಹ ಆದೇಶ ಹೊರಡಿಸಲು ಸೂಚಿಸಿಲ್ಲ. ಇಂತಹ ಹೇಳಿಕೆ ಬಿಡುಗಡೆ ಮಾಡಿರೋ ಡಿಡಿಪಿಐ ವಿರುದ್ದ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಸದ್ಯ ರಾಜ್ಯದಲ್ಲಿ ಪಠ್ಯಪುಸ್ತಕ ವಿವಾದ ಈಗಷ್ಟೇ ತಣ್ಣಗಾಗುತ್ತಿದೆ. ಸಚಿವರು ಯಾವುದೇ ಲೋಪವಿದ್ದರೂ ತಿಳಿಸಿ ನಾವು ಸರಿಪಡಿಸುತ್ತೇವೆ ಎಂದ ಬಳಿಕ ವಿವಾದ ತಣ್ಣಗಾಗಿದೆ. ಈ ಬೆನ್ನಲ್ಲೇ ಮತ್ತೊಂದು ವಿವಾದ ಹುಟ್ಟಿಕೊಂಡಿರುವುದು ರಾಜ್ಯದ ಜನರ ನಿದ್ದೆಗೆಡಿಸಿದೆ.