ಬೆಂಗಳೂರು: 10 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಗೆ ಸಿದ್ದತೆ ಮಾಡಿದ್ದೇವೆ. ಆರ್ಥಿಕ ಇಲಾಖೆ ಒಪ್ಪಿಗೆ ಕೊಟ್ಟ ಕೂಡಲೇ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶುರು ಮಾಡೋದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.
ವಿಧಾನ ಪರಿಷತ್ (Vidhan Parishad) ಪಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ತಳವಾರ್ ಸಾಬಣ್ಣ ಪ್ರಶ್ನೆ ಕೇಳಿದ್ರು.ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷರ ಕೊರತೆ ಇದೆ. ಶಿಕ್ಷಕರು (Teachers) ಇಲ್ಲದೆ ಪ್ರತಿ ಬಾರಿ ರಿಸಲ್ಟ್ ನಲ್ಲಿ ಕಲ್ಯಾಣ ಕರ್ನಾಟಕ (Kalyana Karnataka) ಹಿಂದೆ ಬೀಳುತ್ತಿದೆ. 19 ಸಾವಿರ ಶಿಕ್ಷಕರ ಕೊರತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಇದೆ. ಶಿಕ್ಷಕರ ಜೊತೆಗೆ ಕೊಠಡಿಗಳ ಸಮಸ್ಯೆ ಇದೆ. ಕೂಡಲೇ ಶಿಕ್ಷಕರ ನೇಮಕ ಮಾಡಬೇಕು ಅಂತ ಆಗ್ರಹಿಸಿದರು.
Advertisement
Advertisement
ಇದಕ್ಕೆ ಸಚಿವ ಮಧು ಬಂಗಾರಪ್ಪ ಉತ್ತರ ನೀಡಿ, ಶಿಕ್ಷಣ ಇಲಾಖೆಯಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇದೆ. 10 ಸಾವಿರ ಶಿಕ್ಷಕರ ನೇಮಕಕ್ಕೆ ಆರ್ಥಿಕ ಇಲಾಖೆಗೆ ಪತ್ರ ಬರೆಯಲಾಗಿದೆ. ಆರ್ಥಿಕ ಇಲಾಖೆ ಅನುಮತಿ ಕೊಟ್ಟ ಬಳಿಕ 10 ಸಾವಿರ ಹುದ್ದೆ ನೇಮಕ ಪ್ರಕ್ರಿಯೆ ಶುರು ಮಾಡ್ತೀವಿ ಎಂದರು. ಇದನ್ನೂ ಓದಿ: ಕಾವೇರಿ ನೀರು ಬಿಡುಗಡೆ ವಿಚಾರ; ರಾಜ್ಯ ಸರ್ಕಾರ ನಿರ್ಧಾರದ ಬೆನ್ನಲ್ಲೇ ಸರ್ವಪಕ್ಷಗಳ ಸಭೆ ಕರೆದ ತ.ನಾಡು ಸರ್ಕಾರ
Advertisement
10 ಸಾವಿರ ಹುದ್ದೆಗಳಲ್ಲಿ 6,500 ಹುದ್ದೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಕೊಡಲಾಗುತ್ತದೆ. ಸದ್ಯ ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದೆ. ಆರ್ಥಿಕ ಇಲಾಖೆ ಅನುಮತಿ ಕೊಟ್ಟ ಬಳಿಕ ಆದಷ್ಟು ಬೇಗ ನೇಮಕಾತಿ ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.
Advertisement
ಈ ವೇಳೆ ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಮಾತನಾಡಿ, ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ 6500 ಶಿಕ್ಷಕರ ಹುದ್ದೆ ಖಾಲಿ ಇವೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆಗಿದೆ. ಕಲ್ಯಾಣ ಕರ್ನಾಟಕ ಭಾಗದ ಹುದ್ದೆ ತುಂಬಲು ಆರ್ಥಿಕ ಇಲಾಖೆ ಅನುಮತಿ ಬೇಕಿಲ್ಲ ಅನ್ನೋ ನಿಯಮ ಇದೆ. ಹೀಗಾಗಿ ಶಿಕ್ಷಕರ ನೇಮಕಕ್ಕೆ ಪ್ರಕ್ರಿಯೆ ಶುರುವಾಗಿದೆ. ಆದಷ್ಟು ಬೇಗ ನೇಮಕ ಪ್ರಕ್ರಿಯೆ ಮಾಡಿಕೊಳ್ಳುತ್ತೇವೆ ಎಂದರು.