ಬೆಂಗಳೂರು: ಸರ್ಕಾರಿ ಶಾಲೆಗಳನ್ನ ಮತ್ತಷ್ಟು ಹೈಟೆಕ್ ಮಾಡಲು ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಹೊಸ ಹೆಜ್ಜೆ ಇಟ್ಟಿದೆ. ಖಾಸಗಿ ಶಾಲಾ ಮಕ್ಕಳಿಗೆ ಸರ್ಕಾರಿ ಶಾಲಾ ಮಕ್ಕಳು ಸ್ಪರ್ಧೆ ನೀಡುವಂತೆ ಮಾಡಲು ಸರ್ಕಾರಿ ಶಾಲೆಗಳಲ್ಲೆ ಸ್ಪೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭಕ್ಕೆ ನಿರ್ಧಾರ ಮಾಡಿದೆ.
Advertisement
ಈಗಾಗಲೇ ಸ್ಪೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ಬಹುತೇಕ ಈ ವರ್ಷವೇ ಸ್ಪೋಕನ್ ಇಂಗ್ಲೀಷ್ ತರಗತಿಗಳು ಪ್ರಾರಂಭ ಆಗಲಿವೆ. ಸರ್ಕಾರಿ ಶಾಲೆಯ ಶಿಕ್ಷಕರನ್ನೇ ಸೆಲೆಕ್ಟ್ ಮಾಡಿ ಮೈಸೂರಿನಲ್ಲಿ ಇರೋ ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಸಂಸ್ಥೆಯಲ್ಲಿ ವಿಶೇಷ ತರಬೇತಿ ನೀಡಲಾಗುತ್ತದೆ. ತರಬೇತಿ ಪಡೆದ ಶಿಕ್ಷಕರು ಮಕ್ಕಳಿಗೆ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲೀಷ್ ತರಬೇತಿ ಕೊಡುತ್ತಾರೆ. ಇದನ್ನೂ ಓದಿ: ರಾಜಪಕ್ಸೆ ಶ್ರೀಲಂಕಾದಿಂದ ಹೊರಹೋಗಲು ನಾವು ಸಹಕಾರ ನೀಡಿಲ್ಲ ಎಂದ ಭಾರತ
Advertisement
Advertisement
ಒಂದು ವೇಳೆ ಶಿಕ್ಷಕರ ಕೊರತೆ ಬಂದರೆ ಔಟ್ ಸೋರ್ಸ್ ಅಥವಾ ಅತಿಥಿ ಶಿಕ್ಷಕರನ್ನ ನೇಮಕ ಮಾಡಿಕೊಂಡು ಸ್ಪೋಕನ್ ಇಂಗ್ಲೀಷ್ ಕಲಿಸಲು ಸರ್ಕಾರ ಮುಂದಾಗಿದೆ. 1 ರಿಂದ 6 ಅಥವಾ 1-8 ನೇ ತರಗತಿವರೆಗೆ ಸ್ಪೋಕನ್ ಇಂಗ್ಲೀಷ್ ತರಬೇತಿ ನೀಡುವ ಪ್ಲ್ಯಾನ್ ಶಿಕ್ಷಣ ಇಲಾಖೆ ಮಾಡಿಕೊಂಡಿದೆ. ವಾರದಲ್ಲಿ ಒಂದು ದಿನ ಶನಿವಾರ ಅಥವಾ ವಾರದಲ್ಲಿ ಎರಡು ದಿನ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ಕಲಿಸಲು ಸರ್ಕಾರ ವೇಳಾಪಟ್ಟಿ ರೆಡಿ ಮಾಡಿಕೊಂಡಿದೆ.
Advertisement
ಈಗಾಗಲೇ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕೂಡಾ ಇಂಗ್ಲೀಷ್ ಸ್ಪೀಕಿಂಗ್ ಕೋರ್ಸ್ ಕಲಿಸಲು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಸಿಎಂ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಸರ್ಕಾರ ಸ್ಪೋಕನ್ ಇಂಗ್ಲೀಷ್ ಕಲಿಕೆ ಬಗ್ಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.