ಸಿದ್ದರಾಮಯ್ಯರಿಂದ `ಧ್ಯಾನ’ ಭಂಗ- ಬಿ.ಸಿ ನಾಗೇಶ್ ತೀವ್ರ ವಾಗ್ದಾಳಿ

Public TV
3 Min Read
BC Nagesh Siddaramaiah

ಬೆಂಗಳೂರು: ಶಾಲಾ, ಕಾಲೇಜುಗಳಲ್ಲಿ (School College) ಪ್ರತಿನಿತ್ಯ 10 ನಿಮಿಷ ಧ್ಯಾನ (Meditation) ಮಾಡಬೇಕೆನ್ನುವ ಶಿಕ್ಷಣ ಸಚಿವರ (Education Minister) ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಸಚಿವ ಬಿ.ಸಿ ನಾಗೇಶ್ (BC Nagesh) ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಿದ್ಯಾರ್ಥಿಗಳಲ್ಲಿ (Students) ಏಕಾಗ್ರತೆ, ಸಕಾರಾತ್ಮಕತೆ ಹೆಚ್ಚಿಸುವ ಸಲುವಾಗಿ ಶಾಲೆ, ಕಾಲೇಜುಗಳಲ್ಲಿ ಪ್ರತಿ ನಿತ್ಯ 10 ನಿಮಿಷ ಧ್ಯಾನ ಮಾಡಿಸಲು ಆದೇಶ ಹೊರಡಿಸುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಚಿವ ಬಿ.ಸಿ ನಾಗೇಶ್ (BC Nagesh) ಪತ್ರ ಬರೆದಿದ್ದಾರೆ. ಇದರಿಂದ ಸಚಿವ ನಾಗೇಶ್ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಬಿ.ಸಿ ನಾಗೇಶ್ ಅವರು ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಭಾರತ-ಜಿಂಬಾಬ್ವೆ ಪಂದ್ಯ ಮಳೆಯಿಂದ ರದ್ದಾದರೆ ಯಾರಿಗೆ ಅವಕಾಶ? – ಸೆಮಿಸ್ ಲೆಕ್ಕಾಚಾರ ಹೀಗಿದೆ

ಟ್ವೀಟ್‌ನಲ್ಲಿ ಏನಿದೆ?
ಧ್ಯಾನವನ್ನೂ ರಾಜಕೀಯ (Politics) ಅಜೆಂಡಾ, ಗಿಮಿಕ್ ಎನ್ನಲು ಟಿಪ್ಪು (Tippu Sultan) ಆರಾಧಕರಿಂದ ಮಾತ್ರ ಸಾಧ್ಯ. ಈ ಮೊದಲು ಕಾಂಗ್ರೆಸ್ ನಾಯಕರು ಯೋಗಾಚರಣೆ ವಿರೋಧಿಸಿದ್ದರು. ಈಗ ಧ್ಯಾನಕ್ಕೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರೇ ಧ್ಯಾನದಿಂದ ಯಾವ ಕೆಡಕು ಇದೆ ಎಂಬುದನ್ನು ವಿವರಿಸುವಿರಾ? ಇದನ್ನೂ ಓದಿ: ಕಾಂಗ್ರೆಸ್‍ನವರಿಗೆ ಧ್ಯಾನ ಅಂದ್ರೆ ಸೋನಿಯಾ, ರಾಹುಲ್ ಗಾಂಧಿಯೇ ಆಗಿದೆ: ಪ್ರಹ್ಲಾದ್ ಜೋಶಿ

ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ? ಇದನ್ನೂ ಓದಿ: ಯಶ್ ಅಭಿಮಾನಿಗಳಿಗೆ ಮತ್ತೆ ನಿರಾಸೆ: ‘ಬ್ರಹ್ಮಾಸ್ತ್ರ’ದಲ್ಲಿ ನಟಿಸುತ್ತಿಲ್ಲ ರಾಕಿಂಗ್ ಸ್ಟಾರ್

ಶಿಕ್ಷಣ ಕ್ಷೇತ್ರದ ಸುಧಾರಣೆ, ಬದಲಾವಣೆ, ಏಳಿಗೆ ಮತ್ತು ಅಭಿವೃದ್ಧಿಯೇ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ಸರ್ಕಾರ ಕೋವಿಡ್-19 ಸಂದರ್ಭದಲ್ಲಿ ಇಡೀ ದೇಶದಲ್ಲೇ ಮೊದಲು ನಮ್ಮ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಭೌತಿಕ ತರಗತಿಗಳನ್ನು ಆರಂಭಿಸಿತು. ಕೋವಿಡ್-19 ಕಾರಣ ಎರಡು ವರ್ಷಗಳ ಕಾಲ ಭೌತಿಕ ತರಗತಿಗಳಿಲ್ಲದೇ ಮಕ್ಕಳ ಕಲಿಕೆಯಲ್ಲಿ ಉಂಟಾದ ಹಿನ್ನಡೆ ಸರಿದೂಗಿಸಲು ದೇಶದಲ್ಲೇ ಮೊದಲು `ಕಲಿಕಾ ಚೇತರಿಕೆ’ ಕಾರ್ಯಕ್ರಮವನ್ನು ಇಡೀ ದೇಶಕ್ಕೆ ಮಾದರಿಯಾಗಿ ಅನುಷ್ಠಾನಗೊಳಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ದಾಖಲೆಯ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.

bc nagesh

21ನೇ ಶತಮಾನದ ಅಗತ್ಯಗಳಿಗೆ ಪೂರಕವಾಗಿರುವ `ರಾಷ್ಟ್ರೀಯ ಶಿಕ್ಷಣ ನೀತಿ-2020′ ಅನುಷ್ಠಾನಗೊಳಿಸಲಾಗುತ್ತಿದೆ. ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ನೀಗಿಸಲು 8,100 ಕೊಠಡಿ ನಿರ್ಮಿಸಲಾಗುತ್ತಿದೆ. ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ/ಬಾಳೆಹಣ್ಣು/ಚಿಕ್ಕಿ ನೀಡಲಾಗುತ್ತಿದೆ.

BC Nagesh AND siddu

ಶಿಕ್ಷಣದ ಗುಣಮಟ್ಟ ಕಾಪಾಡಿಕೊಳ್ಳಲು ಶೈಕ್ಷಣಿಕ ವರ್ಷದ ಆರಂಭದಲ್ಲೇ 30 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರು/ಉಪನ್ಯಾಸಕರ ಸೇವೆ ಪಡೆಯಲಾಗಿದೆ. ದೈಹಿಕ ಶಿಕ್ಷಕರು ಸೇರಿದಂತೆ 2,500 ಪ್ರೌಢಶಾಲಾ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕ ಪ್ರಕ್ರಿಯೆಯನ್ನು ಮುಂಬರುವ ದಿನಗಳಲ್ಲಿ ಆರಂಭಿಸಲಾಗುತ್ತಿದೆ. ಸಂಶೋಧಕರು, ವೈದ್ಯರು, ವಿಜ್ಞಾನಿಗಳ ಪ್ರಕಾರ, ಯೋಗ ಮತ್ತು ಧ್ಯಾನ ಮಾಡುವುದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ. ಆದರೆ, ನೀವು ಮಾತ್ರ ಧ್ಯಾನ, ಯೋಗ ಮಾಡಿದರೆ ಮಕ್ಕಳು ಕುಗ್ಗಿ ಹೋಗುತ್ತಾರೆ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ತಿರುಗೇಟು ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *