ಬೆಂಗಳೂರು: ಮುರಸು ಚಂಡಮಾರುತದ (Cyclone Murasu) ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ದಕ್ಷಿಣ ಕರ್ನಾಟಕ ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಎರಡು ದಿನದ ಬಳಿಕ ಮುರಸು ಚಂಡ ಮಾರುತ ದುರ್ಬಲಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಸ್ಟಿಂಗ್ ಪ್ರಕರಣದಲ್ಲಿ ಕುಮಾರಸ್ವಾಮಿ ತನಿಖೆಗೆ ಸಹಕಾರ ಕೊಡಲಿ, ಕಳಂಕದಿಂದ ಹೊರಬರಲಿ: ಹೆಚ್.ಸಿ.ಬಾಲಕೃಷ್ಣ
ಈ ವಾರದಲ್ಲೆ ಮುರಸು ಚಂಡಮಾರುತ ದುರ್ಬಲಗೊಳ್ಳಲಿದ್ದು, ಮುಂದಿನ ಮೂರು ದಿನ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಕಲಬುರಗಿ | ಅಧಿಕಾರಿಗಳ ನಿರ್ಲಕ್ಷ್ಯ – ಶಾಲಾ ಮಕ್ಕಳಿಂದಲೇ ರಸ್ತೆ ಗುಂಡಿ ದುರಸ್ತಿ
