Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡ ಭಾಷಾ ಕಲಿಕೆ ಪರಿಣಾಮಕಾರಿ ಅನುಷ್ಠಾನವಾಗಲಿ – ಶಿಕ್ಷಣ ಸಚಿವರಿಗೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡ ಭಾಷಾ ಕಲಿಕೆ ಪರಿಣಾಮಕಾರಿ ಅನುಷ್ಠಾನವಾಗಲಿ – ಶಿಕ್ಷಣ ಸಚಿವರಿಗೆ ಮನವಿ

Bengaluru City

ಕನ್ನಡ ಭಾಷಾ ಕಲಿಕೆ ಪರಿಣಾಮಕಾರಿ ಅನುಷ್ಠಾನವಾಗಲಿ – ಶಿಕ್ಷಣ ಸಚಿವರಿಗೆ ಮನವಿ

Public TV
Last updated: August 20, 2021 7:42 pm
Public TV
Share
2 Min Read
education
SHARE

ಬೆಂಗಳೂರು: ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಅನ್ವಯ 2017-18ನೇ ಸಾಲಿನಿಂದ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಶೈಕ್ಷಣಿಕ ಸಂಸ್ಥೆಗಳಿಗೆ ಕಡ್ಡಾಯಗೊಳಿಸಲಾಗಿದೆ. ಆದರೆ ಕೆಲ ಶಾಲೆಗಳು ಈ ನಿಯಮವನ್ನು ಪಾಲಿಸುತ್ತಿಲ್ಲ. ಈ ಬಗ್ಗೆ ಗಮನ ಹರಿಸಿ ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಮನವಿ ಮಾಡಿದರು.

nagarbarana

2017-18ನೇ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗಿ 2020-21ನೇ ಶೈಕ್ಷಣಿಕ ವರ್ಷಕ್ಕೆ 4ನೇ ತರಗತಿ ಮಕ್ಕಳಿಗೆ ಈ ನಿಯಮದಡಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಿರಬೇಕಿತ್ತು. ಆದರೆ ರಾಜ್ಯದಲ್ಲಿರುವ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಈ ನಿಯಮವನ್ನು ಉಲ್ಲಂಘಿಸುತ್ತಿರುವ ಬಗ್ಗೆ ಪ್ರಾಧಿಕಾರಕ್ಕೆ ನಿರಂತರವಾಗಿ ದೂರುಗಳು ಸಲ್ಲಿಕೆಯಾಗುತ್ತಿವೆ. ಕರ್ನಾಟಕ ರಾಜ್ಯ ಪಠ್ಯಪುಸ್ತಕ ಸಂಘದಿಂದ ಪ್ರಾಧಿಕಾರಕ್ಕೆ ಬಂದಿರುವ ಅಧಿಕೃತ ಮಾಹಿತಿ ಅನ್ವಯ 2021-22ನೇ ಶೈಕ್ಷಣಿಕ ವರ್ಷಕ್ಕೆ ರಾಜ್ಯದ ಸುಮಾರು 823 ಶಾಲೆಗಳು ಸರ್ಕಾರ ನಿಗದಿಪಡಿಸಿರುವ ಕನ್ನಡ ಪಠ್ಯಪುಸ್ತಕಗಳನ್ನು ಖರೀದಿಸಲು ಅಧಿಕೃತ ಪಟ್ಟಿ ಸಲ್ಲಿಸಿರುವುದಿಲ್ಲ. ಹೀಗಾಗಿ ಈ ಶಾಲೆಗಳು ಕನ್ನಡ ಭಾಷಾ ಕಲಿಕಾ ಅಧಿನಿಯಮ-2015 ಅನ್ನು ಸರಿಯಾಗಿ ಪಾಲಿಸುತ್ತಿರುವುದು ಅನುಮಾನ ಬರುವಂತಿದೆ. ಹೀಗಾಗಿ ಶಿಕ್ಷಣ ಇಲಾಖೆಯಲ್ಲಿನ ಎಲ್ಲ ಶೈಕ್ಷಣಿಕ ಜಿಲ್ಲೆಗಳ ಉಪ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಎನ್‍ಇಪಿ ಮೂಲಕ ಶಿಕ್ಷಣದಲ್ಲಿ ಸುಧಾರಣೆ: ಬಿ.ಸಿ.ನಾಗೇಶ್

KANNADA medium

1,2,3 ಮತ್ತು 4ನೇ ತರಗತಿಗೆ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಲಾಗಿದೆಯೇ ಪರಿಶೀಲಿಸುವುದು. ತರಗತಿಗಳಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು ಸಕ್ಷಮ ಪ್ರಾಧಿಕಾರದಿಂದ ಖರೀದಿಸಲಾಗಿದೆಯೇ? ಅಗತ್ಯ ದಾಖಲೆಗಳನ್ನು ಸಂಗ್ರಹಿಸುವುದು. ಕನ್ನಡ ವಿಷಯಕ್ಕೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಶಿಕ್ಷಕರನ್ನು ನೇಮಕ ಮಾಡಿರುವ ಬಗ್ಗೆ ಹಾಗೂ ಶಿಕ್ಷಕರಿಗೆ ನಿಯಮಾನುಸಾರ ತರಗತಿಗಳನ್ನು ಹಂಚಿಕೆ ಮಾಡಿರುವ ಬಗ್ಗೆ ಪರಿಶೀಲಿಸುವುದು. ವಿದ್ಯಾರ್ಥಿಗಳಿಗೆ 100 ಅಂಕದ ಕನ್ನಡ ಪರೀಕ್ಷೆಯನ್ನು ನಡೆಸಿರುವ ಬಗ್ಗೆ, ಅದರಂತೆ ಮೌಲ್ಯಮಾಪನ ಮಾಡಿರುವ ಬಗ್ಗೆ ಹಾಗೂ ಮೌಲ್ಯಮಾಪನದಂತೆ ಅಂಕಪಟ್ಟಿಯನ್ನು ವಿತರಿಸಿರುವ ಬಗ್ಗೆ ಪರಿಶೀಲಿಸಿ ದಾಖಲೆಗಳನ್ನು ಸಂಗ್ರಹಿಸುವುದು.

education minister

ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರಂತೆ ಉಳಿದೆಲ್ಲಾ ಅಗತ್ಯ ಪರಿಶೀಲನೆಗಳನ್ನು ನಡೆಸುವುದು. ಈ ಬಗ್ಗೆ 15 ದಿನಗಳೊಳಗಾಗಿ ಪ್ರಾಧಿಕಾರಕ್ಕೆ ವಿಸ್ತೃತ ವರದಿ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಈ ಸಂಬಂಧ ಶೀಘ್ರದಲ್ಲಿಯೇ ನೂತನ ಶಿಕ್ಷಣ ಸಚಿವರೊಂದಿಗೆ ಉನ್ನತ ಮಟ್ಟದ ಸಮಿತಿ ಸಭೆ ಕರೆಯಲಾಗುವುದು ಎಂದು ಉಪನಿರ್ದೇಶಕರುಗಳಿಗೆ ಪತ್ರ ಬರೆಯಲಾಗಿದೆ ಎಂದು ಸಚಿವರಿಗೆ ಇದೇ ವೇಳೆ ಪ್ರಾಧಿಕಾರದ ಅಧ್ಯಕ್ಷರು ಮಾಹಿತಿ ನೀಡಿದರು. ಇದನ್ನೂ ಓದಿ: ಮಕ್ಕಳಿಗೆ ಸಾಂಸ್ಕೃತಿಕ ವಾತಾವರಣ ಕಟ್ಟಿಕೊಡಿ: ಟಿ.ಎಸ್ ನಾಗಾಭರಣ

ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ಲ ಹಾಜರಿದ್ದರು.

TAGGED:BC NageshDr santhosh hangaleducation ministerkannadalanguagePublic TVTS Nagabharanaಕನ್ನಡಟಿ.ಎಸ್ ನಾಗಾಭರಣಡಾ.ಸಂತೋಷ ಹಾನಗಲ್ಲಪಬ್ಲಿಕ್ ಟಿವಿಬಿ.ಸಿ.ನಾಗೇಶ್ಭಾಷಾ ಕಲಿಕಾಶಾಲೆಶಿಕ್ಷಣ ಸಚಿವ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

ಸಾಂದರ್ಭಿಕ ಚಿತ್ರ
Bengaluru City

ಸಹಜ ಸ್ಥಿತಿಗೆ ಮರಳುತ್ತಿದೆ ಆಟೋ ಚಾಲಕರ ಗ್ಯಾಸ್ ಪರದಾಟ

Public TV
By Public TV
17 minutes ago
Shobha Karandlaje 1
Bagalkot

ಮೀಸಲು ಕಾನೂನು – ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸ್ತ್ರೀ ಸಮಾವೇಶ: ಶೋಭಾ ಕರಂದ್ಲಾಜೆ

Public TV
By Public TV
28 minutes ago
Islamabad Talks
Latest

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ ಆರಂಭ – ಇರಾನಿನ ಕೆಲ ಬೇಡಿಕೆಗಳಿಗೆ ಅಮೆರಿಕ ತಾತ್ವಿಕ ಒಪ್ಪಿಗೆ

Public TV
By Public TV
49 minutes ago
BMW Car Accident
Crime

ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ – ಹೈಕೋರ್ಟ್‌ನ ಹಿರಿಯ ವಕೀಲ ಸಾವು

Public TV
By Public TV
1 hour ago
zameer ahmed s.s.mallikarjun
Bengaluru City

ದಾವಣಗೆರೆ ದಕ್ಷಿಣ ದಂಗಲ್ ಎಫೆಕ್ಟ್ – ಸ್ವಪಕ್ಷದಲ್ಲೇ ಸಚಿವ ಜಮೀರ್‌ಗೆ ಟ್ರಬಲ್, ತಿರುಗಿಬಿದ್ದ ಮತ್ತೊಂದು ಮುಸ್ಲಿಂ ಬಣ

Public TV
By Public TV
2 hours ago
Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?