ಅಮೆರಿಕದೊಂದಿಗಿನ ಸುಂಕ ಭಿನ್ನಾಭಿಪ್ರಾಯ ಪರಿಹಾರಕ್ಕೆ ಪ್ರಯತ್ನ: ಕೇಂದ್ರ ಸರ್ಕಾರ

Public TV
1 Min Read
narendra modi trump

ನವದೆಹಲಿ: ಟ್ಯಾರಿಫ್‌ (Tariff) ವಿಚಾರವಾಗಿ ಅಮೆರಿಕದೊಂದಿಗಿನ (US) ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಪ್ರಯತ್ನ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಭಾರತವು ರಷ್ಯಾದ ತೈಲ ಖರೀದಿಗೆ ದಂಡವಾಗಿ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕವನ್ನು ಬುಧವಾರ ಜಾರಿಗೆ ತಂದಿದೆ. ಭಾರತ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಭಿನ್ನಾಭಿಪ್ರಾಯವನ್ನು ಪರಿಹರಿಸಲು ಪ್ರಯತ್ನಗಳು ನಡೆಯುತ್ತಿವೆ. ಎರಡೂ ದೇಶಗಳ ನಡುವಿನ ದೀರ್ಘಕಾಲೀನ ಸಂಬಂಧದಲ್ಲಿ ಪ್ರಸ್ತುತ ಪರಿಸ್ಥಿತಿ ತಾತ್ಕಾಲಿಕ ಅಷ್ಟೇ ಎಂದು ಕೇಂದ್ರ ಭರವಸೆ ವ್ಯಕ್ತಪಡಿಸಿದೆ. ಇದನ್ನೂ ಓದಿ: ಉಕ್ರೇನ್ ರಷ್ಯಾ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದ ಅಮೆರಿಕ

Narendra Modi 2

ಅಮೆರಿಕದ ಸುಂಕಗಳ ಪರಿಣಾಮ ತೀವ್ರವಾಗಿರುವುದಿಲ್ಲ. ಹೀಗಾಗಿ, ರಫ್ತುದಾರರು ಭಯಭೀತರಾಗುವ ಅಗತ್ಯವಿಲ್ಲ. ಭಾರತದ ವೈವಿಧ್ಯಮಯ ರಫ್ತು ನೆಲೆಯೇ ಇದಕ್ಕೆ ಕಾರಣ. ಭಾರತದ ಮೇಲಿನ ಒಟ್ಟು ಸುಂಕಗಳು ಈಗ ಶೇ.50 ರಷ್ಟು ತಲುಪಿದೆ ಎಂದು ಹೇಳಿದೆ.

ಯುಎಸ್ ಟ್ರೆಷರಿ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್, ಭಾರತ-ಯುಎಸ್ ಸಂಬಂಧಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಎಂದು ನಾನು ಭಾವಿಸುತ್ತೇನೆ. ಯುಎಸ್ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಿದೆ. ಮತ್ತೆ ನಾವು ಒಂದಾಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಒಂದಲ್ಲ, 4 ಬಾರಿ ಟ್ರಂಪ್‌ ಕರೆ ಮಾಡಿದ್ರೂ ಉತ್ತರಿಸದ ಮೋದಿ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂದು ಬೆಸೆಂಟ್ ತಿಳಿಸಿದ್ದಾರೆ.

Share This Article