ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದ ನಂತರ ಶಿಕ್ಷಣ (Education) ಕ್ಷೇತ್ರದಲ್ಲಿ ಹಲವು ಬದಲಾವಣೆ ತರಲಾಗಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಬದಲಾವಣೆ ತರಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು.
ಶಿವಮೊಗ್ಗದಲ್ಲಿ (Shivamogga) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ 8 ನೇ ತರಗತಿಯವರೆಗಿನ ಮಕ್ಕಳಿಗೆ ಮೊಟ್ಟೆ ವಿತರಣೆ ನಡೆಯುತಿತ್ತು. ಆದರೆ ಇನ್ನು ಮುಂದೆ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ನೀಡಲಾಗುವುದು. ಆಗಸ್ಟ್ 18ರಂದು ಮಂಡ್ಯದಲ್ಲಿ (Mandya) ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದರು. ಇದನ್ನೂ ಓದಿ: ಎಚ್‍ಎಎಲ್‍ನಲ್ಲಿ ಉದ್ಯೋಗವಕಾಶಕ್ಕೆ ಮನವಿ: ಪರಮೇಶ್ವರ್
Advertisement
Advertisement
ಡಿಜಿಟಲ್ ಲೈಬ್ರರಿಯಲ್ಲಿ 40 ಲಕ್ಷದಷ್ಟು ಪುಸ್ತಕವಿದ್ದು, ಹೆಚ್ಚಿನ ಸದಸ್ಯರನ್ನು ಹೊಂದುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ರಮಕ್ಕೆ ಸೆ.5ರಂದು ಮರು ಉದ್ಘಾಟಿಸಲಾಗುವುದು ಎಂದರು. ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಸದ್ಯದಲ್ಲಿ ಹೋಬಳಿಗೊಂದು ಶಾಲೆಯನ್ನು ಆರಂಭಿಸಲಾಗುವುದು ಮುಂದಿನ ದಿನಗಳಲ್ಲಿ ಎರಡು ಮೂರು ಗ್ರಾಮ ಪಂಚಾಯ್ತಿಗೆ ಒಂದರಂತೆ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ಅದೇನ್ ಬಿಚ್ಚಿಡ್ತಾರೋ ಬಿಚ್ಚಿಡಲಿ- ಹೆಚ್‍ಡಿಕೆಗೆ ಡಿಕೆಶಿ ಸವಾಲು
Advertisement
Web Stories