ಬೆಂಗಳೂರು: ಮೊಟ್ಟೆ ಸಾಗಿಸುತ್ತಿದ್ದ ಲಾರಿಯೊಂದು ಹೆದ್ದಾರಿಯಲ್ಲಿ ಉರುಳಿ ಬಿದ್ದ ಪರಿಣಾಮ ಮೊಟ್ಟೆಗಳೆಲ್ಲ ರಸ್ತೆಗೆ ಉರುಳಿ ಸಂಚಾರ ಸ್ಥಗಿತಗೊಂಡಿದ್ದ ಘಟನೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ನಡೆದಿದೆ.
ಬೆಂಗಳೂರು ಹೊರವಲಯ ಆನೇಕಲ್ ಗಡಿಗೆ ಹೊಂದಿಕೊಂಡಿರೋ ಸೂಳಗಿರಿಯಲ್ಲಿ ಹಾದುಹೋಗಿರುವ ಹೊಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೊಟ್ಟೆ ತುಂಬಿದ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಹೆದ್ದಾರಿ ತುಂಬಾ ಮೊಟ್ಟೆಗಳು ಒಡೆದು ಚೆಲ್ಲಿದ್ದು, ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿತ್ತು.
Advertisement
Advertisement
ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಾಮಿಸಿದ ಅಗ್ನಿಶಾಮಕ ಸಿಬ್ಬಂದಿ ನೀರು ಹರಿಸಿ ರಸ್ತೆಯನ್ನು ಸ್ವಚ್ಛಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮೊಟ್ಟೆ ಲಾರಿ ಉರುಳಿ ಬೀಳುತ್ತಿದ್ದಂತೆ ಸ್ಥಳದಲ್ಲಿದ್ದ ಕೆಲವರು ಮೊಟ್ಟೆಗಳನ್ನು ತುಂಬಿಕೊಂಡು ಪರಾರಿಯಾಗಿದ್ದಾರೆ.
Advertisement
ಅಪಘಾತದಲ್ಲಿ ಲಾರಿ ಚಾಲಕನಿಗೆ ಗಂಭೀರವಾಗಿ ಗಾಯವಾಗಿದ್ದು,ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಉರುಳಿದ ವಾಹನವನ್ನು ಬದಿಗೆ ಸರಿಸಿ ಇತರೆ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.