ಬೆಂಗಳೂರು: ಮೊಟ್ಟೆಗಳನ್ನು ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೇಗೂರು ಬಳಿ ನಡೆದಿದೆ.
ಲಾರಿ ಪಲ್ಟಿಯಾದ ಪರಿಣಾಮ ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ಸವಾರರು ಕೆಲಕಾಲ ಪರದಾಡುವ ಪರಿಸ್ಥಿತಿ ಎದುರಾಗಿತ್ತು. ಲಾರಿ ತುಮಕೂರಿನಿಂದ ಬೆಂಗಳೂರು ಕಡೆ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
Advertisement
Advertisement
ಘಟನೆಯಿಂದ ಲಕ್ಷಾಂತರ ರೂ. ಮೌಲ್ಯದ ಮೊಟ್ಟೆಗಳು ಹಾನಿಗೀಡಾಗಿವೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ನೆಲಮಂಗಲ ಟ್ರಾಫಿಕ್ ಪೊಲೀಸರು ಕ್ರೇನ್ ಮೂಲಕ ಲಾರಿಯನ್ನು ಮೇಲೆತ್ತಿದ್ದಾರೆ. ಅಲ್ಲದೇ ವಾಹನ ದಟ್ಟಣೆ ನಿಯಂತ್ರಿಸಲು ಹರಸಾಹಸಪಟ್ಟರು.