ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರ ಮೇಲೆ ಮೊಟ್ಟೆ ಎಸೆತ ಪ್ರಕರಣದ ಮೂವರು ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಆರೋಪಿಗಳಾದ ಚಂದ್ರು, ವಿಶ್ವನಾಥ, ಕೃಷ್ಣಮೂರ್ತಿಗೆ ಗುರುವಾರ 32ನೇ ಎಸಿಎಂಎಂ ನ್ಯಾಯಾಲಯ (ACMM Court) ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್ – ಡಿಕೆಶಿ, ಡಿಕೆಸು, ಕುಸುಮ, ಹನುಮಂತರಾಯಪ್ಪ ವಿರುದ್ಧ ದೂರು
ಏನಿದು ಪ್ರಕರಣ?
ಲಗ್ಗೆರೆ ವಾರ್ಡ್‌ನಲ್ಲಿರುವ ಲಕ್ಷ್ಮಿದೇವಿ ನಗರದಲ್ಲಿ ವಾಜಪೇಯಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮರಳಿ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದಾಗ ಮೊಟ್ಟೆ ದಾಳಿ ನಡೆದಿತ್ತು. ಕೂಡಲೇ ದಾಳಿಕೋರರನ್ನ ಮುನಿರತ್ನ ಬೆಂಬಲಿಗರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಈ ಸಂಬಂಧ ಕೇಸ್ ದಾಖಲಿಸಿಕೊಂಡಿದ್ದ ನಂದಿನಿ ಲೇಔಟ್ ಪೊಲೀಸರು ಮೂವರು ಆರೋಪಿಗಳನ್ನ ಬಂಧಿಸಿದ್ದರು. ಇಂದು ಮೂವರು ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಇದನ್ನೂ ಓದಿ: ನಕಲಿ ಕಾಂಗ್ರೆಸ್ ನೀತಿ ವಿರುದ್ಧ ನಾಳೆ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ: ಬಿ.ವೈ.ವಿಜಯೇಂದ್ರ
ಮುನಿರತ್ನ ಡಿಸ್ಚಾರ್ಜ್:
ಮೊಟ್ಟೆ ದಾಳಿ ಬಳಿಕ ನಗರದ ಕೆ.ಸಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಮುನಿರತ್ನ, ವೈದ್ಯರ ಸೂಚನೆ ಮೇರೆಗೆ ಬುಧವಾರ ರಾತ್ರಿ ಆಸ್ಪತ್ರೆಯಲ್ಲೇ ಉಳಿದಿದ್ದರು. ಗುರುವಾರ (ಇಂದು) ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆ ಮತ್ತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಇದನ್ನೂ ಓದಿ: 2.5 ಕೋಟಿ ಚಿನ್ನಾಭರಣ ವಂಚನೆ ಕೇಸ್ – ನನಗೂ ಶ್ವೇತಾಗೂ ಸಂಬಂಧವಿಲ್ಲ: ಪವಿತ್ರಾಗೌಡ ಸ್ನೇಹಿತೆ ಸಮತಾ ಸ್ಪಷ್ಟನೆ
ಈ ದಾಳಿ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್, ಕುಸುಮಾ, ಹನುಮಂತರಾಯಪ್ಪ ಇದ್ದಾರೆ. ಪೊಲೀಸರು ಇಲ್ಲದಿದ್ರೆ ನನ್ನ ಕೊಲೆ ಆಗುತ್ತಿತ್ತು. ನೀವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕುಸುಮಾ ಶಾಸಕಿ ಆಗಬೇಕು ಎಂದು ಇತ್ತೀಚಿಗೆ ಕೆಲವರು ಧಮ್ಕಿ ಹಾಕ್ತಿದ್ದಾರೆ ಎಂದು ಮುನಿರತ್ನ ಆರೋಪಿಸಿದ್ದಾರೆ. ಇದನ್ನೂ ಓದಿ: ತಲೆಗೆ ಮೊಟ್ಟೆ ಏಟು – ಆಸ್ಪತ್ರೆಯಿಂದ ಮುನಿರತ್ನ ಡಿಸ್ಚಾರ್ಜ್