ಮಡಿಕೇರಿ: ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿ ರಾಜಕೀಯ ಮೇಲಾಟ, ಕಿತ್ತಾಟದ ನಡುವೆ ಕೊಡಗಿನಲ್ಲಿ ನಾಳೆಯಿಂದ ಶನಿವಾರದವರೆಗೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ.
ಕೊಡಗಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಆರೋಪ ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿದ್ದು, 2 ಪಕ್ಷಗಳು ಪ್ರತಿಭಟನೆಯನ್ನು ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ನಾಳೆಯಿಂದ ಆ.27ರವರೆಗೆ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಜಾರಿಗೊಳಿಸಿದ್ದು, ಈ 4 ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಿದೆ.
Advertisement
Advertisement
ಘಟನೆಗೆ ಪೊಲೀಸ್ ಇಲಾಖೆ ವೈಫಲ್ಯ ಎಂದು ಆರೋಪಿಸಿ ಇದೇ 26ರಂದು ಕಾಂಗ್ರೆಸ್ ಪಕ್ಷದಿಂದ ಮಡಿಕೇರಿ ಚಲೋವನ್ನು ಹಮ್ಮಿಕೊಂಡಿತ್ತು. ಎಸ್‍ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧರಿಸಿತ್ತು. ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಕೊಡಗಿನ 2 ಕಡೆ ಮೊಟ್ಟೆ ದಾಳಿ
Advertisement
Advertisement
ಇತ್ತ ಬಿಜೆಪಿ ಕೂಡ ಕೌಂಟರ್ ಆಗಿ ಕಾಂಗ್ರೆಸ್ ವಿರುದ್ಧ ಹೋರಾಟ ತೀವ್ರಗೊಳಿಸಲು ಕಾರ್ಯಕರ್ತರನ್ನು ಒಗ್ಗೂಡಿಸಿತ್ತು. ಜೊತೆಗೆ ಮಡಿಕೇರಿಯ ಕಾಂಗ್ರೆಸ್ ಪಕ್ಷದ ವಿರುದ್ಧ ಜನ ಜಾಗೃತಿ ಸಮಾವೇಶ ಬಿಜೆಪಿ ತಯಾರಿ ಸಹ ನಡೆಸಿತ್ತು. ಕೊಡಗು ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕರಪತ್ರವನ್ನು ಹಂಚುವಂತೆ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಕರೆ ನೀಡಿದ್ದರು. ಕೊಡಗಿನ ಪ್ರತಿ ಗ್ರಾಮದಿಂದಲೂ ಹೊರಟು, ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮಡಿಕೇರಿ ನಗರದ ಗಾಂಧಿ ಮೈದಾನಕ್ಕೆ ಬರುವಂತೆ ಮನವಿ ಮಾಡಿದ್ದರು.
ಇದೆಲ್ಲಾ ರಾಜಕೀಯ ಮೇಲಾಟ ಕಿತ್ತಾಟದ ನಡುವೆ ಇದೀಗ ಕೊಡಗು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ. 4 ದಿನಗಳ ಕಾಲ 144 ಸೆಕ್ಷನ್ ಹಾಕಲಾಗಿದ್ದು, ಎರಡು ಪಕ್ಷದವರಿಗೂ ಸಮಾವೇಶ ಹಾಗೂ ಪ್ರತಿಭಟನೆ ಮಾಡುವುದನ್ನು ನಿರ್ಬಂಧ ಮಾಡಲಾಗಿದೆ. ನಾಳೆಯಿಂದ ಆ. 27ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿ ಸತೀಶ್ ಖಡಕ್ ಆದೇಶ ಕೊಟ್ಟಿದ್ದಾರೆ. ಇದನ್ನೂ ಓದಿ: ಮೊಟ್ಟೆ ಬೇಕಿದ್ರೆ ಇನ್ನೂ ನಾಲ್ಕು ಹೊಡೀರಿ: ಡಿ.ಕೆ.ಶಿವಕುಮಾರ್
ಆದರೆ, ಪೂರ್ವ ಯೋಚಿತ, ಮದುವೆ, ನಾಮಕರಣ, ಗೃಹಪ್ರವೇಶ, ಸರ್ಕಾರಿ ಕಾರ್ಯಕ್ರಮಗಳನ್ನು ನಿಗದಿಯಂತೆ ಮಾಡಲು ಅವಕಾಶ ಕೊಡಲಾಗಿದೆ. ಯಾವುದೇ ರಾಜಕೀಯ ಸಭೆ ಸಮಾರಂಭಗಳು, ಪ್ರತಿಭಟನೆ, ಮೆರವಣಿಗೆ, ರ‍್ಯಾಲಿ ನಡೆಸದಂತೆ ನಿರ್ಬಂಧ ಹೇರಲಾಗಿದೆ.