ಮಡಿಕೇರಿ: ಗುಡ್ಡೆಹೊಸೂರಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಇದೀಗ ಸಂಪತ್ ಸಹೋದರನ ಮದುವೆಯಲ್ಲಿ ಮಾಜಿ ಸಚಿವ ಜೀವಿಜಯ ಭಾಗಿಯಾಗಿದ್ದ ಫೋಟೋ ರಿಲೀಸ್ ಆಗಿದೆ.
ಇತ್ತೀಚೆಗಷ್ಟೇ ಗುಡ್ಡೆಹೊಸೂರಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿ ಸಂಪತ್ ಮಾತನಾಡಿ, ತಾನು ಮೊದಲು ಜೆಡಿಎಸ್ ಮೆಂಬರ್ ಆಗಿದ್ದೆ, ಆನಂತರ ಕಾಂಗ್ರೆಸ್ ಕಾರ್ಯಕರ್ತನಾದೆ. ಅಲ್ಲದೆ ಮಾಜಿ ಸಚಿವ ಕೈ ನಾಯಕ ಜೀವಿಜಯ ಫಾಲೋವರ್ ಎಂದು ಹೇಳಿಕೊಂಡಿದ್ದ.
ಈತನ ಹೇಳಿಕೆಗೆ ಮಾಜಿ ಸಚಿವ ಜೀವಿಜಯ ಪ್ರತಿಕ್ರಿಯಿಸಿ, ಸಂಪತ್ ಯಾರೆಂದು ನನಗೆ ಗೊತ್ತಿಲ್ಲ. ಸಂಪತ್‍ನನ್ನು ನೋಡೇ ಇಲ್ಲ. ಸಂಪತ್ ಜೊತೆ ಇರುವ ಫೋಟೋ ಬಿಡುಗಡೆ ಮಾಡುವಂತೆ ಸವಾಲು ಹಾಕಿದ್ದರು. ಇದೀಗ ಸಂಪತ್ ಸಹೋದರರನ ಮದುವೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಜೀವಿಜಯ ಫೋಟೋ ರಿಲೀಸ್ ಆಗಿ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದನ್ನೂ ಓದಿ: ಮಧ್ಯಾಹ್ನ ಮಾಂಸಾಹಾರ ತಿಂದು ಸಂಜೆ ದೇವಸ್ಥಾನಕ್ಕೆ ಹೋಗಬಾರದಾ : ಸಿದ್ದರಾಮಯ್ಯ ಪ್ರಶ್ನೆ
ಸಂಪತ್ ಯಾರು ಎನ್ನವುದರ ಬಗ್ಗೆ ಈಗ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಜಗಳ ನಡೆಯುತ್ತಿದೆ. ಕಾಂಗ್ರೆಸ್‍ನವರು ಆತ ಬಿಜೆಪಿ ಕಾರ್ಯಕರ್ತ ಎಂದಿದ್ದರೆ ಬಿಜೆಪಿಯವರು ಆತ ಕಾಂಗ್ರೆಸ್ ಕಾರ್ಯಕರ್ತ ಎನ್ನುತ್ತಿದ್ದಾರೆ. ಬಿಜೆಪಿ ನಾಯಕರು ಮೊಟ್ಟೆ ಎಸೆದದ್ದು ಕಾಂಗ್ರೆಸ್ ಕಾರ್ಯಕರ್ತ. ಹೀಗಾಗಿ ಕಾಂಗ್ರೆಸ್ ವಿರುದ್ಧವೇ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಪ್ರತಿಕ್ರಿಯಿಸುತ್ತಿದ್ದಾರೆ. ಇದನ್ನೂ ಓದಿ: ಮಧ್ಯಾಹ್ನ ನಾಟಿ ಕೋಳಿ ಊಟ ಮಾಡಿ ಸಂಜೆ ದೇವಸ್ಥಾನಕ್ಕೆ ಭೇಟಿ ಕೊಟ್ರಾ ಸಿದ್ದರಾಮಯ್ಯ?