ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಬೆಂಗಳೂರಿನಲ್ಲಿ ಝಡ್ ಶ್ರೇಣಿಯ ಭದ್ರತೆಯನ್ನು ನೀಡಲಾಗಿದೆ.
ಕೊಡಗಿನಲ್ಲಿ ಮೊಟ್ಟೆ ಎಸೆತ ಪ್ರಕರಣದ ಬಳಿಕ ಈಗ ಸಿದ್ದರಾಮಯ್ಯಗೆ ಎಸ್ಕಾರ್ಟ್ ಹೆಚ್ಚಿಸಲಾಗಿದೆ. ಅಧಿಕಾರಿಗಳು, ಸಿಬ್ಬಂದಿ ಸೇರಿ 21 ಮಂದಿಯನ್ನು ನಿಯೋಜನೆ ಮಾಡಲಾಗಿದೆ.
Advertisement
ಮೂರು ಪಾಳಿಯಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸಬೇಕು. ಎಲ್ಲೇ ಹೋದರೂ ಮುಂಜಾಗ್ರತೆ ವಹಿಸುವಂತೆ ಪ್ರತಿ ಸಿಬ್ಬಂದಿಗೆ ಸೂಚಿಸಲಾಗಿದೆ.
Advertisement
Advertisement
ಬೆಗಳೂರಿನಿಂದ ಹೊರ ಹೋಗುವ ವೇಳೆ ಹೈವೇ ಪ್ಯಾಟ್ರೋಲಿಂಗ್, ಸ್ಥಳೀಯ ಪೊಲೀಸರು ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕು ಗೃಹ ಇಲಾಖೆ ಸೂಚಿಸಿದೆ. ಇದನ್ನೂ ಓದಿ: ನಾಟಿ ಕೋಳಿ ಊಟ ಮಾಡಿ ಅಂಬಾರಿಗೆ ಪುಷ್ಪಾರ್ಚನೆ: ಸಿದ್ದು ವಿರುದ್ಧ ಪ್ರತಾಪ್ ಸಿಂಹ ಕಿಡಿ
Advertisement
ಸಿದ್ದರಾಮಯ್ಯ ಅಲ್ಲದೇ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಮತ್ತು ಕುಮಾರಸ್ವಾಮಿಗೆ ಝಡ್ ಶ್ರೇಣಿಯ ಭದ್ರತೆ ನೀಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಗೆ ಝಡ್ ಪ್ಲಸ್ ಶ್ರೇಣಿಯ ಭದ್ರತೆ ನೀಡಲಾಗಿದೆ.
ಜಿಲ್ಲಾ ಪ್ರವಾಸದ ವೇಳೆ ಸಂದರ್ಭಾನುಸಾರ ಸಿಬ್ಬಂದಿ ಹೆಚ್ಚಿಸಲು ಎಲ್ಲ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.