ಕೋಲ್ಕತ್ತಾ: ಬಿಜೆಪಿ (BJP) ಬೆಂಬಲಿಗರ ಗುಂಪೊಂದು ನನ್ನ ಕಾರಿನ ಮೇಲೆ ಕಲ್ಲು, ಮೊಟ್ಟೆ, ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರು ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳದ (West Bengal) ನಾಡಿಯಾ ಜಿಲ್ಲೆಯ ಕಲಿಕಂಜ್ನಲ್ಲಿ ಬಿಜೆಪಿ ಬೆಂಬಲಿಗರ ಗುಂಪೊಂದು ಕಾರಿನ ಮೇಲೆ ಕಲ್ಲು, ಮೊಟ್ಟೆ, ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ಕೋಲ್ಕತ್ತಾ ಹೈಕೋರ್ಟ್ (Kolkatta High Court) ಆದೇಶ ಹೊರತಾಗಿಯೂ ಭದ್ರತೆ ಒದಗಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆಂದು ದೂರಿದ್ದಾರೆ. ಇದನ್ನೂ ಓದಿ: ಹಿರಿಯೂರು ಟಿಕೆಟ್ಗೆ ಅಮಿತ್ ಶಾಗೆ ಹೆಚ್ಡಿಕೆ ಮನವರಿಕೆ
ಸಾಮಾಜಿಕ ಜಾಲತಾಣದಲ್ಲಿ ದಾಳಿಯ ದೃಶ್ಯವನ್ನು ಹಂಚಿಕೊಂಡು, ಪೊಲೀಸರಿಗೆ ಗೊತ್ತಿದ್ದರೂ ತಡೆಯದೇ ನಮ್ಮನ್ನೇ ಬೇಗ ಹೊರಡಿ ಅಂತಾರೆ. ಕಪ್ಪು ಬಾವುಟ ಪ್ರದರ್ಶಿಸಿ ಗೋಬ್ಯಾಕ್ ಘೋಷಣೆ ಕೂಗಿದ್ದಾರೆ. ಕೋಲುಗಳು ಮತ್ತು ಮೊಟ್ಟೆಗಳಿಂದ ದಾಳಿ ನಡೆಸಿದ್ದಾರೆ. ಆದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಅಂತ ಕಿಡಿಕಾರಿದ್ದಾರೆ. ಅಲ್ಲದೆ, ಕೋಲ್ಕತ್ತಾ ಹೈಕೋರ್ಟ್ ಸಿಜೆ ಹಾಗೂ ಸುಪ್ರೀಂಕೋರ್ಟ್ ಜಡ್ಜ್ ಈ ಬಗ್ಗೆ ಗಮನ ಹರಿಸಬೇಕು ಎಂದು ಎಕ್ಸ್ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
