ಚಿತ್ರದುರ್ಗ: ಟಿಪ್ಪರ್ ಲಾರಿ ಹಾಗೂ ಈಚರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ವೃದ್ಧೆ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ.

ಈ ಘಟನೆಯಿಂದಾಗಿ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ರಾಧಿಕಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಎಸ್ಸಿ, ಎಸ್ಟಿಗಳ ಮೇಲೆ ಹೆಚ್ಚಿದ ದೌರ್ಜನ್ಯ ಪ್ರಕರಣಗಳು- ಎನ್ಸಿಆರ್ಬಿ ವರದಿ
ಚಾಲಕರ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎಂದು ಮೆಲ್ನೋಟಕ್ಕೆ ತಿಳಿದುಬಂದಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

