ಕೋಲ್ಕತ್ತಾ: ದೇಶದ ಪ್ರಸ್ತುತ ಪರಿಸ್ಥಿತಿ ಚೆನ್ನಾಗಿಲ್ಲ. ಆದರೂ ಭಯ ಪಡಬೇಡಿ. ಹೋರಾಟ ಮುಂದುವರಿಸಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು.
ಕೋಲ್ಕತ್ತಾದಲ್ಲಿ ರಂಜಾನ್ ನಿಮಿತ್ತ ನಡೆದ ಈದ್-ಉಲ್-ಫಿತರ್ ಪ್ರಾರ್ಥನೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಡೆಯುತ್ತಿರುವ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಭಯಪಡಬೇಡಿ. ಉತ್ತಮ ಭವಿಷ್ಯಕ್ಕಾಗಿ ಎಲ್ಲರೂ ಒಂದಾಗುವಂತೆ ಅವರು ಕರೆ ನೀಡಿದರು.
Advertisement
Advertisement
ದೇಶದಲ್ಲಿ ನಡೆಯುತ್ತಿರುವ ಪ್ರತ್ಯೇಕತೆಯ ರಾಜಕೀಯ ಸ್ವಾಗತಾರ್ಹವಲ್ಲ. ಇಂದು ದೇಶವನ್ನು ಒಡೆದು ಆಳುವ ನೀತಿ ನಡೆಯುತ್ತಿದೆ. ಈ ಒಡೆದು ಆಳುವ ನೀತಿ ಸರಿಯಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಇಲಿ ಕಚ್ಚಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಯುಪಿ ಸಚಿವ – ಚಿಕಿತ್ಸೆ ಬಳಿಕ ಡಿಸ್ಚಾರ್ಜ್
Advertisement
Advertisement
ಈದ್ ಪ್ರಾರ್ಥನೆಗಾಗಿ ನೆರೆದಿದ್ದ ಸುಮಾರು 14,000 ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು, ನಮ್ಮ ಪಕ್ಷ ಹಾಗೂ ಸರ್ಕಾರ ನಿಮಗೆ ಯಾವುದೇ ರೀತಿಯ ದುಃಖವನ್ನುಂಟು ಮಾಡುವ ಕೆಲಸವನ್ನು ಮಾಡುವುದಿಲ್ಲ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಮಸೀದಿ ಹೊರಗೆ ನಿಂತಿದ್ದ ಭದ್ರತಾ ಪಡೆಗಳ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ