LatestMain PostNational

ದೇಶದ ಪರಿಸ್ಥಿತಿ ಚೆನ್ನಾಗಿಲ್ಲ, ಭಯಪಡಬೇಡಿ, ಹೋರಾಟ ಮುಂದುವರೆಸಿ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ದೇಶದ ಪ್ರಸ್ತುತ ಪರಿಸ್ಥಿತಿ ಚೆನ್ನಾಗಿಲ್ಲ. ಆದರೂ ಭಯ ಪಡಬೇಡಿ. ಹೋರಾಟ ಮುಂದುವರಿಸಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು.

ಕೋಲ್ಕತ್ತಾದಲ್ಲಿ ರಂಜಾನ್‌ ನಿಮಿತ್ತ ನಡೆದ ಈದ್-ಉಲ್-ಫಿತರ್ ಪ್ರಾರ್ಥನೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಡೆಯುತ್ತಿರುವ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಭಯಪಡಬೇಡಿ. ಉತ್ತಮ ಭವಿಷ್ಯಕ್ಕಾಗಿ ಎಲ್ಲರೂ ಒಂದಾಗುವಂತೆ ಅವರು ಕರೆ ನೀಡಿದರು.

ದೇಶದಲ್ಲಿ ನಡೆಯುತ್ತಿರುವ ಪ್ರತ್ಯೇಕತೆಯ ರಾಜಕೀಯ ಸ್ವಾಗತಾರ್ಹವಲ್ಲ. ಇಂದು ದೇಶವನ್ನು ಒಡೆದು ಆಳುವ ನೀತಿ ನಡೆಯುತ್ತಿದೆ. ಈ ಒಡೆದು ಆಳುವ ನೀತಿ ಸರಿಯಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಇಲಿ ಕಚ್ಚಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಯುಪಿ ಸಚಿವ – ಚಿಕಿತ್ಸೆ ಬಳಿಕ ಡಿಸ್ಚಾರ್ಜ್

ಈದ್ ಪ್ರಾರ್ಥನೆಗಾಗಿ ನೆರೆದಿದ್ದ ಸುಮಾರು 14,000 ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು, ನಮ್ಮ ಪಕ್ಷ ಹಾಗೂ ಸರ್ಕಾರ ನಿಮಗೆ ಯಾವುದೇ ರೀತಿಯ ದುಃಖವನ್ನುಂಟು ಮಾಡುವ ಕೆಲಸವನ್ನು ಮಾಡುವುದಿಲ್ಲ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಮಸೀದಿ ಹೊರಗೆ ನಿಂತಿದ್ದ ಭದ್ರತಾ ಪಡೆಗಳ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

Leave a Reply

Your email address will not be published.

Back to top button