ಕಳೆದ ಎರಡು ದಿನಗಳ ಹಿಂದೆ ರೆಂಜುಶಾ (Renjusha Menon) ಎಂಬ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬೆನ್ನಲ್ಲೇ ಮತ್ತೊಂದು ಕಹಿ ಸುದ್ದಿ ಸಿಕ್ಕಿದೆ. 8 ತಿಂಗಳು ಗರ್ಭಿಣಿಯಾಗಿದ್ದ ಮಲಯಾಳಂ ನಟಿ ಪ್ರಿಯಾ ಹೃದಯಾಘಾತದಿಂದ ಇಂದು (ನ.1) ವಿಧಿವಶರಾಗಿದ್ದಾರೆ. ಇದನ್ನೂ ಓದಿ:ಸಾನ್ಯ ಅಯ್ಯರ್ ಈಗ ಇನ್ನೂ ಸಖತ್ ಹಾಟ್
Advertisement
ವೈದ್ಯ ಪ್ರಿಯಾ (Dr.Priya) ಅವರು ಹಲವು ಸೀರಿಯಲ್ಗಳಲ್ಲಿ ನಟಿಸಿದ್ದಾರೆ. ಮಲಯಾಳಂ ಕಿರುತೆರೆಯಲ್ಲಿ ಬೇಡಿಕೆಯ ನಟಿಯಾಗಿದ್ರು. ಮದುವೆಯ ಬಳಿಕ ನಟನೆಗೆ ಪ್ರಿಯಾ ಬ್ರೇಕ್ ನೀಡಿದ್ದರು. 35ನೇ ವಯಸ್ಸಿನ ಪ್ರಿಯಾ, 8 ತಿಂಗಳ ತುಂಬು ಗರ್ಭಿಣಿಯಾಗಿದ್ದರು. ಎಂದಿನಂತೆ ಹೆಲ್ತ್ ಚೆಕಪ್ಗೆ ಖಾಸಗಿ ಆಸ್ಪತ್ರೆಗೆ ಹೋದಾಗ ನಟಿಗೆ ಹೃದಯಾಘಾತವಾಗಿದೆ. ಈ ವೇಳೆ, ನಟಿಗೆ ಸೀಸರಿನ್ ಮೂಲಕ ಡೆಲಿವರಿ ಮಾಡಿ, ನವಜಾತ ಶಿಶುಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
Advertisement
ಒಬ್ಬಳೇ ಮಗಳಾಗಿರುವ ಪ್ರಿಯಾಳ ಸಾವು ಕಂಡು ತಾಯಿ ಆಘಾತಕ್ಕೆ ಒಳಗಾಗಿದ್ದಾರೆ. ಇದೀಗ ಪ್ರಿಯಾ ನಿಧನಕ್ಕೆ ನಟ ಕಿಶೋರ್ ಸತ್ಯ ಸೇರಿದಂತೆ ಅನೇಕ ಕಿರುತೆರೆ ನಟ-ನಟಿಯರು ಕಂಬಿನಿ ಮಿಡಿದಿದ್ದಾರೆ.
Advertisement